ಹಲ್ದ್ವಾನಿ ಹಿಂಸಾಚಾರದ ಮಾಸ್ಟರ್ ಮೈಂಡ್ ದೆಹಲಿಯಲ್ಲಿ ಬಂಧನ
ಹಲ್ದ್ವಾನಿ ಹಿಂಸಾಚಾರ ಪ್ರಕರಣದ ಮಾಸ್ಟರ್ ಮೈಂಡ್ ಅಬ್ದುಲ್ ಮಲಿಕ್ ನನ್ನು ಶನಿವಾರ ದೆಹಲಿಯಲ್ಲಿ ಬಂಧಿಸಲಾಗಿದೆ.

ನವದೆಹಲಿ: ಹಲ್ದ್ವಾನಿ ಹಿಂಸಾಚಾರ ಪ್ರಕರಣದ ಮಾಸ್ಟರ್ ಮೈಂಡ್ ಅಬ್ದುಲ್ ಮಲಿಕ್ ನನ್ನು ಶನಿವಾರ ದೆಹಲಿಯಲ್ಲಿ ಬಂಧಿಸಲಾಗಿದೆ ಎಂದು ನೈನಿತಾಲ್ ಎಸ್ ಎಸ್ ಪಿ ಪ್ರಹ್ಲಾದ್ ನಾರಾಯಣ ಅವರು ಮೀನಾ ತಿಳಿಸಿದ್ದಾರೆ.
ಗುಜರಾತ್, ದೆಹಲಿ, ಮಹಾರಾಷ್ಟ್ರ, ಉತ್ತರ ಪ್ರದೇಶ ಮತ್ತು ಬಿಹಾರ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮಲಿಕ್ ಹಾಗೂ ಅವರ ಮಗ ಅಬ್ದುಲ್ ಮೊಯ್ದ್ ಬಂಧನಕ್ಕೆ ಆರು ತಂಡಗಳನ್ನು ರಚಿಸಲಾಗಿತ್ತು ಎಂದು ಎಸ್ಎಸ್ ಪಿ ಹೇಳಿದ್ದಾರೆ.
ಈ ಆರು ತಂಡಗಳಲ್ಲಿ ಒಂದು ತಂಡ ದೆಹಲಿಯಿಂದ ಮಲಿಕ್ ನನ್ನು ಬಂಧಿಸಿದೆ. ಆದರೆ ಅವರ ಮಗ ಇನ್ನೂ ಪರಾರಿಯಾಗಿದ್ದಾನೆ ಎಂದು ಮೀನಾ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಮಲಿಕ್, ಹಲ್ದ್ವಾನಿಯ ಬನ್‌ಭೂಲ್‌ಪುರ ಪ್ರದೇಶದಲ್ಲಿ "ಕಾನೂನುಬಾಹಿರವಾಗಿ" ಮದರಸಾವನ್ನು ನಿರ್ಮಿಸಿದ್ದು, ಸ್ಥಳೀಯ ಆಡಳಿತ ಅದನ್ನು ಫೆಬ್ರವರಿ 8 ರಂದು ತೆರವುಗೊಳಿಸಲು ಮುಂದಾದಾಗ ಘರ್ಷಣೆ ನಡೆದಿತ್ತು. ಈ ಹಿಂಸಾಚಾರದಲ್ಲಿ 6 ಮಂದಿ ಸಾವನ್ನಪ್ಪಿದ್ದು, ಪೊಲೀಸರು ಮತ್ತು ಪತ್ರಕರ್ತರು ಸೇರಿದಂತೆ 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



