ಹರಿಯಾಣ: ಅಪರಿಚಿತ ದುಷ್ಕರ್ಮಿಗಳಿಂದ ಐಎನ್‌ಎಲ್‌ಡಿ ಅಧ್ಯಕ್ಷನ ಗುಂಡಿಕ್ಕಿ ಹತ್ಯೆ
ಭಾರತೀಯ ರಾಷ್ಟ್ರೀಯ ಲೋಕದಳದ ಹರಿಯಾಣ ಘಟಕದ ಅಧ್ಯಕ್ಷ ನಫ್ ಸಿಂಗ್ ರಾಥೀ ಅವರನ್ನು ಜಜ್ಜರ್ ಜಿಲ್ಲೆಯಲ್ಲಿ ಅಪರಿಚಿತ ದುಷ್ಕರ್ಮಿಗಳು ಭಾನುವಾರ ಗುಂಡಿಕ್ಕಿ ಕೊಂದಿದ್ದಾರೆ ಎಂದು ಪಕ್ಷದ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.

ಹರಿಯಾಣ: ಭಾರತೀಯ ರಾಷ್ಟ್ರೀಯ ಲೋಕದಳದ ಹರಿಯಾಣ ಘಟಕದ ಅಧ್ಯಕ್ಷ ನಫ್ ಸಿಂಗ್ ರಾಥೀ ಅವರನ್ನು ಜಜ್ಜರ್ ಜಿಲ್ಲೆಯಲ್ಲಿ ಅಪರಿಚಿತ ದುಷ್ಕರ್ಮಿಗಳು ಭಾನುವಾರ ಗುಂಡಿಕ್ಕಿ ಕೊಂದಿದ್ದಾರೆ ಎಂದು ಪಕ್ಷದ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.
ಮಾಜಿ ಶಾಸಕ ರಾಥೀ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಜಜ್ಜರ್‌ನ ಬಹದ್ದೂರ್‌ಗಢ ಪಟ್ಟಣದಲ್ಲಿ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಅವರ ಮೇಲೆ ದಾಳಿ ನಡೆಸಿದ್ದಾರೆ. ಈ ಕುರಿತು ಪಿಟಿಐ ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಐಎನ್‌ಎಲ್‌ಡಿ ನಾಯಕ ಅಭಯ್ ಚೌತಾಲಾ, ಝಜ್ಜರ್ ಜಿಲ್ಲೆಯಲ್ಲಿ ರಾಥೀ ಅವರನ್ನು ಗುಂಡಿಕ್ಕಿ ಕೊಂದಿದ್ದಾರೆ ಎಂದು ತಿಳಿಸಿದ್ದಾರೆ.
ರಾಥೀ ಅವರಿಗೆ ಜೀವ ಬೆದರಿಕೆ ಇದ್ದರೂ ಭದ್ರತೆ ಒದಗಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದ ಅವರು, ಮುಖ್ಯಮಂತ್ರಿ ಹಾಗೂ ಗೃಹ ಸಚಿವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದರು. ಈ ಸಂಬಂಧ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



