ಅಪಘಾತದಲ್ಲಿ ಶಾಸಕಿ ಲಾಸ್ಯ ನಂದಿತಾ ಸಾವು; ಸಚಿವರು, ಶಾಸಕರ ಚಾಲಕರಿಗೆ ಡ್ರೈವಿಂಗ್ ಟೆಸ್ಟ್ ನಡೆಸಲಿದೆ ತೆಲಂಗಾಣ ಸರ್ಕಾರ
ಸಚಿವರು, ಶಾಸಕರು, ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ಚಾಲಕರಿಗೆ ಡ್ರೈವಿಂಗ್ ಟೆಸ್ಟ್ ನಡೆಸಲಾಗುವುದು ಎಂದು ತೆಲಂಗಾಣ ಸರ್ಕಾರ ಹೇಳಿದೆ. ಬಿಆರ್ಎಸ್ ಶಾಸಕಿ ಲಾಸ್ಯ ನಂದಿತಾ ಅವರು ರಸ್ತೆ ಅಪಘಾತದಲ್ಲಿ ಸಾವಿಗೀಡಾದ ಎರಡು ದಿನಗಳ ನಂತರ ಈ ಘೋಷಣೆ ಬಂದಿದೆ.

ಹೈದರಾಬಾದ್: ಸಚಿವರು, ಶಾಸಕರು, ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ಚಾಲಕರಿಗೆ ಡ್ರೈವಿಂಗ್ ಟೆಸ್ಟ್ ನಡೆಸಲಾಗುವುದು ಎಂದು ತೆಲಂಗಾಣ ಸರ್ಕಾರ ಹೇಳಿದೆ.
ಬಿಆರ್ಎಸ್ ಶಾಸಕಿ ಲಾಸ್ಯ ನಂದಿತಾ ಅವರು ರಸ್ತೆ ಅಪಘಾತದಲ್ಲಿ ಸಾವಿಗೀಡಾದ ಎರಡು ದಿನಗಳ ನಂತರ ಈ ಘೋಷಣೆ ಬಂದಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಾರಿಗೆ ಸಚಿವ ಪೊನ್ನಂ ಪ್ರಭಾಕರ್, ರಸ್ತೆ ಅಪಘಾತಗಳಲ್ಲಿ ವಿಐಪಿಗಳ ಮರಣವನ್ನು ಉಲ್ಲೇಖಿಸಿ, ಅನನುಭವಿ ಚಾಲಕರು ಇದಕ್ಕೆ ಕಾರಣ. ದೂರದ ಪ್ರಯಾಣಕ್ಕೆ ಸಮರ್ಥ ಚಾಲಕರನ್ನು ನೇಮಿಸುವ ಅಗತ್ಯವನ್ನು ಅವರು ಒತ್ತಿ ಹೇಳಿದರು.
ಈಮಧ್ಯೆ, ಪ್ರಕರಣದ ತನಿಖೆಯ ಭಾಗವಾಗಿ ಬಿಆರ್ಎಸ್ ಶಾಸಕಿ ಲಾಸ್ಯ ನಂದಿತಾ ಅವರ ಕಾರನ್ನು ಚಲಾಯಿಸಿದ ಆಪ್ತ ಸಹಾಯಕನ ಹೇಳಿಕೆಯನ್ನು ಮ್ಯಾಜಿಸ್ಟ್ರೇಟ್ ಮುಂದೆ ದಾಖಲಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಸಿಕಂದರಾಬಾದ್ ಕಂಟೋನ್ಮೆಂಟ್ನ ಶಾಸಕಿ ಲಾಸ್ಯ ನಂದಿತಾ ಅವರು ಶುಕ್ರವಾರ ನೆರೆಯ ಸಂಗಾರೆಡ್ಡಿ ಜಿಲ್ಲೆಯ ಪಟಂಚೇರು ಎಂಬಲ್ಲಿ ರಸ್ತೆ ಅಪಘಾತದಲ್ಲಿ ಸಾವಿಗೀಡಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



