ಅಗ್ನಿಪಥ್ ಯೋಜನೆಯಿಂದ ದೇಶದ ಯುವಕರಿಗೆ ತೀವ್ರ ಅನ್ಯಾಯ: ರಾಷ್ಟ್ರಪತಿಗೆ ಪತ್ರ ಬರೆದ ಮಲ್ಲಿಕಾರ್ಜುನ ಖರ್ಗೆ
ಅಗ್ನಿಪಥ್ ಯೋಜನೆಯಿಂದಾಗಿ ಸಶಸ್ತ್ರ ಪಡೆಗಳಲ್ಲಿ ನಿಯಮಿತ ಉದ್ಯೋಗವನ್ನು ಬಯಸುತ್ತಿರುವ ದೇಶದ ಯುವಕರಿಗೆ 'ಘೋರ ಅನ್ಯಾಯ' ಮಾಡಲಾಗಿದೆ ಎಂದು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಸೋಮವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದು, ಯುವಕರಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿದ್ದಾರೆ.

ನವದೆಹಲಿ: ಅಗ್ನಿಪಥ್ ಯೋಜನೆಯಿಂದಾಗಿ ಸಶಸ್ತ್ರ ಪಡೆಗಳಲ್ಲಿ ನಿಯಮಿತ ಉದ್ಯೋಗವನ್ನು ಬಯಸುತ್ತಿರುವ ದೇಶದ ಯುವಕರಿಗೆ 'ಘೋರ ಅನ್ಯಾಯ' ಮಾಡಲಾಗಿದೆ ಎಂದು ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ ಸೋಮವಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ಬರೆದಿದ್ದು, ಯುವಕರಿಗೆ ನ್ಯಾಯ ಒದಗಿಸುವಂತೆ ಒತ್ತಾಯಿಸಿದ್ದಾರೆ.
ಸಶಸ್ತ್ರ ಪಡೆಗಳಲ್ಲಿ ನಿಯಮಿತ ನೇಮಕಾತಿ ಪ್ರಕ್ರಿಯೆ ಅಂತ್ಯಗೊಂಡಿರುವುದರಿಂದ ಸುಮಾರು 2 ಲಕ್ಷ ಯುವಕ-ಯುವತಿಯರ ಭವಿಷ್ಯ ಅತಂತ್ರವಾಗಿದೆ ಎಂದು ಖರ್ಗೆ ರಾಷ್ಟ್ರಪತಿಗಳಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಭಾರತೀಯ ಸಶಸ್ತ್ರ ಪಡೆಗಳ ಸರ್ವೋಚ್ಚ ಕಮಾಂಡರ್ ಕೂಡ ಆಗಿದ್ದಾರೆ.
ಈ ಯುವಕರು ತಮ್ಮ ಕನಸಗಳ ಈಡೇರಿಸಿಕೊಳ್ಳುವ ಪ್ರಯತ್ನದಲ್ಲಿ ವರ್ಷಗಳ ಕಾಲ ಕಳೆದಿದ್ದಾರೆ ಮತ್ತು 'ಪರಿಣಾಮವಾಗಿ ಹತಾಶೆ ಮತ್ತು ಭರವಸೆ ಕಾಣದಿರುವುದು ಹಲವಾರು ಸಾವುಗಳಿಗೆ ಕಾರಣವಾಯಿತು' ಎಂದು ಖರ್ಗೆ ತಿಳಿಸಿದ್ದಾರೆ.
'ನಮ್ಮ ಯುವಕರು ಈ ರೀತಿ ತೊಂದರೆ ಅನುಭವಿಸಲು ಬಿಡಬಾರದು. ಅವರಿಗೆ ಸೂಕ್ತ ನ್ಯಾಯ ಲಭ್ಯವಾಗುವಂತೆ ನೋಡಿಕೊಳ್ಳಲು ನಾನು ನಿಮಗೆ ಮನವಿ ಮಾಡುತ್ತೇನೆ' ಎಂದು ಅವರು ಹೇಳಿದ್ದಾರೆ.
ಜೂನ್ 14, 2022 ರಂದು ಘೋಷಿಸಲಾದ ಅಗ್ನಿಪಥ್ ಯೋಜನೆಯು ಹದಿನೇಳುವರೆ ಯಿಂದ 21 ವರ್ಷ ವಯಸ್ಸಿನ ಯುವಕರನ್ನು ಕೇವಲ ನಾಲ್ಕು ವರ್ಷಗಳ ಅವಧಿಗೆ ಸೇನೆಗೆ ನೇಮಕ ಮಾಡಿಕೊಳ್ಳಲು ಅವಕಾಶ ಕಲ್ಪಿಸುತ್ತದೆ. ಅವರಲ್ಲಿ ಶೇ 25 ರಷ್ಟನ್ನು ಇನ್ನೂ 15 ವರ್ಷಗಳವರೆಗೆ ಉಳಿಸಿಕೊಳ್ಳುವ ಅವಕಾಶವಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



