ರಾಹುಲ್ ಗಾಂಧಿ, ಶಶಿ ತರೂರ್ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಸಿಪಿಐ
ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ(ಸಿಪಿಐ) ಮುಂಬರುವ ಲೋಕಸಭೆ ಚುನಾವಣೆಯಲ್ಲಿ ನಾಲ್ಕು ನಿರ್ಣಾಯಕ ಸ್ಥಾನಗಳಿಗೆ ತನ್ನ ಅಭ್ಯರ್ಥಿಗಳನ್ನು ಸೋಮವಾರ ಪ್ರಕಟಿಸಿದೆ.

ತಿರುವನಂತಪುರಂ: ಕೇರಳದ ಆಡಳಿತಾರೂಢ ಲೆಫ್ಟ್ ಡೆಮಾಕ್ರಟಿಕ್ ಫ್ರಂಟ್‌ನ ಎರಡನೇ ಅತಿದೊಡ್ಡ ಮಿತ್ರ ಪಕ್ಷ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ(ಸಿಪಿಐ) ಮುಂಬರುವ ಲೋಕಸಭೆ ಚುನಾವಣೆಯಲ್ಲಿ ನಾಲ್ಕು ನಿರ್ಣಾಯಕ ಸ್ಥಾನಗಳಿಗೆ ತನ್ನ ಅಭ್ಯರ್ಥಿಗಳನ್ನು ಸೋಮವಾರ ಪ್ರಕಟಿಸಿದೆ.
ಪ್ರಮುಖವಾಗಿ, ಪ್ರಸ್ತುತ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿನಿಧಿಸುತ್ತಿರುವ ವಯನಾಡ್ ಕ್ಷೇತ್ರದಿಂದ ಸಿಪಿಐ ಹಿರಿಯ ನಾಯಕ ಅನ್ನಿ ರಾಜಾ ಅವರು ಸ್ಪರ್ಧಿಸಲಿದ್ದಾರೆ.
ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಅವರು ಪ್ರತಿನಿಧಿಸುವ ಮತ್ತೊಂದು ಪ್ರಮುಖ ಕ್ಷೇತ್ರ ತಿರುವನಂತಪುರಂನಿಂದ ಪಕ್ಷದ ಹಿರಿಯ ಮತ್ತು ಮಾಜಿ ಸಂಸದ ಪನ್ನಿಯನ್ ರವೀಂದ್ರನ್ ಅವರು ಕಣಕ್ಕಿಳಿಯಲಿದ್ದಾರೆ ಎಂದು ಸಿಪಿಐ ಹೇಳಿದೆ.
ಸಿಬಿಐ ರಾಜ್ಯ ಕಾರ್ಯದರ್ಶಿ ಬಿನೋಯ್ ವಿಶ್ವಂ ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ನಾಲ್ಕು ಸ್ಥಾನಗಳಿಗೆ ಅಭ್ಯರ್ಥಿಗಳನ್ನ ಘೋಷಿಸಿದ್ದಾರೆ.
ಮಾಜಿ ಕೃಷಿ ಸಚಿವ ವಿ ಎಸ್ ಸುನೀಲ್ ಕುಮಾರ್ ಮತ್ತು ಪಕ್ಷದ ಯುವ ಘಟಕ ಎಐವೈಎಫ್ ನಾಯಕ ಸಿ ಎ ಅರುಣ್ ಕುಮಾರ್ ಕ್ರಮವಾಗಿ ತ್ರಿಶೂರ್ ಮತ್ತು ಮಾವೇಲಿಕ್ಕರ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಅವರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



