ಮಹಾರಾಷ್ಟ್ರದಲ್ಲಿ ತೀವ್ರಗೊಂಡ ಮರಾಠ ಮೀಸಲಾತಿ ಹೋರಾಟ: ಸರ್ಕಾರಿ ಬಸ್'ಗೆ ಬೆಂಕಿ, ನಿಷೇಧಾಜ್ಞೆ ಜಾರಿ
ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿ ಹೋರಾಟ ಮತ್ತಷ್ಟು ತೀವ್ರಗೊಂಡಿದ್ದು, ಹೋರಾಟಗಾರು ಅಂಬಾದ್ ಎಂಬಲ್ಲಿ ಸರ್ಕಾರಿ ಬಸ್ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ತರಲು ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಮುಂಬೈ (ಮಹಾರಾಷ್ಟ್ರ): ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿ ಹೋರಾಟ ಮತ್ತಷ್ಟು ತೀವ್ರಗೊಂಡಿದ್ದು, ಹೋರಾಟಗಾರು ಅಂಬಾದ್ ಎಂಬಲ್ಲಿ ಸರ್ಕಾರಿ ಬಸ್ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ತರಲು ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಮರಾಠ ಸಮುದಾಯಕ್ಕೆ ಇತರ ಹಿಂದುಳಿದ ವರ್ಗದ (ಒಬಿಸಿ) ಕೋಟಾದಲ್ಲಿ ಮೀಸಲಾತಿ ನೀಡಬೇಕು ಎಂದು ಕೋರಿ ಹೋರಾಟಗಾರ ಮನೋಜ್ ಜಾರಂಗೆ ಸರ್ಕಾರದ ವಿರುದ್ಧ ಕೆಲವು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.
ಉದ್ಯೋಗ, ಶಿಕ್ಷಣದಲ್ಲಿ ಶೇ.10 ರಷ್ಟು ಮೀಸಲಾತಿ ನೀಡುವ ಮಸೂದೆಯನ್ನು ವಿಧಾನಸಭೆಯಲ್ಲಿ ಮಂಡಿಸಿ ಸಿಎಂ ಏಕನಾಥ್ ಶಿಂಧೆ ನೇತೃತ್ವದ ಸರ್ಕಾರ ಅಂಗೀಕಾರ ಪಡೆದುಕೊಂಡಿದೆ. ಆದರೆ, ಇದಕ್ಕೂ ವಿರೋಧ ವ್ಯಕ್ತವಾಗಿದೆ.
ಸರ್ಕಾರ ಮರಾಠರಿಗೆ ನೀಡಿದ ಆಶ್ವಾಸನೆಯಂತೆ ನಡೆದುಕೊಂಡಿಲ್ಲ. ರಾಜ್ಯಾದ್ಯಂತ ಹೋರಾಟವನ್ನು ತೀವ್ರಗೊಳಿಸಲು ಹೋರಾಟಗಾರ ಮನೋಜ್ ಜಾರಂಗೆ ಕರೆ ನೀಡಿದ್ದಾರೆ.
ಇದರಿಂದ ರಾಜ್ಯದ ಹಲವೆಡೆ ಮರಾಠ ಹೋರಾಟ ಮತ್ತೆ ಕಾವು ಪಡೆದುಕೊಂಡಿದೆ. ಸೋಮವಾರದಂದು ಅಂಬಾದ್ನಲ್ಲಿ ಸರ್ಕಾರಿ ಬಸ್ಗೆ ಬೆಂಕಿ ಹಚ್ಚಿದ್ದಾರೆ. ಭಾರೀ ಪ್ರಮಾಣದಲ್ಲಿ ಜನರು ಸೇರಿರುವ ಕಾರಣ ಕಾನೂನು ಸುವ್ಯವಸ್ಥೆ ಹದಗೆಡದಂತೆ ಮುನ್ನೆಚ್ಚರಿಕಾ ಕ್ರಮವಾಗಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ನಿವಾಸಕ್ಕೆ ಮುತ್ತಿಗೆ ಹಾಕುವ ಎಚ್ಚರಿಕೆ ಹಿನ್ನೆಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಪ್ರತಿಭಟನಾಕಾರರು ಸರ್ಕಾರಿ ಬಸ್ಗಳನ್ನು ಗುರಿಯಾಗಿಸಿಕೊಂಡ ಹಿನ್ನೆಲೆಯಲ್ಲಿ ಜಲ್ನಾ ಪ್ರದೇಶದಲ್ಲಿ ಸಂಚಾರವನ್ನು ರದ್ದು ಮಾಡಲಾಗಿದೆ. ಪರಿಸ್ಥಿತಿ ಸೂಕ್ಷ್ಮವಾಗಿರುವ ಕಾರಣ ಪೊಲೀಸ್ ವರಿಷ್ಠಾಧಿಕಾರಿಗಳ ಸೂಚನೆಯ ಮೇರೆಗೆ ಬಸ್ ಬಿಡುವುದನ್ನು ತಡೆ ಹಿಡಿಯಲಾಗಿದೆ. ಜೊತೆಗೆ ಅಂಬಾದ್ನಲ್ಲಿ ಬಸ್ ಸುಟ್ಟು ಹಾಕಿದ್ದರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


