ದೇಶ

ಪಕ್ಷಾಂತರ ಆರೋಪ: ಆಂಧ್ರ ಪ್ರದೇಶದ 8 ಶಾಸಕರು ಅನರ್ಹಗೊಳಿಸಿದ ಸ್ಪೀಕರ್

ದೇಶಾದ್ಯಂತ ರಾಜ್ಯಸಭೆ ಚುನಾವಣಾ ಮತದಾನ ಬಿರುಸಿನಿಂದ ಸಾಗಿರುವಂತೆಯೇ ಇತ್ತ ಆಂಧ್ರ ಪ್ರದೇಶದಲ್ಲಿ ವಿಧಾನಸಭೆಯ ಸ್ಪೀಕರ್ 8 ಶಾಸಕರನ್ನು ಅನರ್ಹಗೊಳಿಸಿದ್ದಾರೆ.

ಪಕ್ಷಾಂತರ ಆರೋಪ: ಆಂಧ್ರ ಪ್ರದೇಶದ 8 ಶಾಸಕರು ಅನರ್ಹಗೊಳಿಸಿದ ಸ್ಪೀಕರ್
ಆಂಧ್ರ ಪ್ರದೇಶ ವಿಧಾನಸಭೆ
Published On :

ಅಮರಾವತಿ: ದೇಶಾದ್ಯಂತ ರಾಜ್ಯಸಭೆ ಚುನಾವಣಾ ಮತದಾನ ಬಿರುಸಿನಿಂದ ಸಾಗಿರುವಂತೆಯೇ ಇತ್ತ ಆಂಧ್ರ ಪ್ರದೇಶದಲ್ಲಿ ವಿಧಾನಸಭೆಯ ಸ್ಪೀಕರ್ 8 ಶಾಸಕರನ್ನು ಅನರ್ಹಗೊಳಿಸಿದ್ದಾರೆ.

ಆಂಧ್ರಪ್ರದೇಶ ವಿಧಾನಸಭೆಯ ಸ್ಪೀಕರ್ ತಮ್ಮಿನೇನಿ ಸೀತಾರಾಮ್ ಅವರು ಪಕ್ಷಾಂತರಿಗಳ ವಿರುದ್ಧ ನಿರ್ಣಾಯಕ ನಿಲುವನ್ನು ತೆಗೆದುಕೊಂಡಿದ್ದು, 8 ಶಾಸಕರನ್ನು ಅನರ್ಹಗೊಳಿಸಿದ್ದಾರೆ. ಯುವಜನ ಶ್ರಮಿಕ ರೈತ ಕಾಂಗ್ರೆಸ್ ಪಕ್ಷ (ವೈಎಸ್‌ಆರ್‌ಸಿಪಿ) ಸಲ್ಲಿಸಿದ ಅರ್ಜಿಯ ಮೇರೆಗೆ ಆ ಪಕ್ಷದ ಆನಂ ರಾಮನಾರಾಯಣ ರೆಡ್ಡಿ, ಮೇಕಪತಿ ಚಂದ್ರಶೇಖರ್ ರೆಡ್ಡಿ, ಕೋಟಂ ರೆಡ್ಡಿ ಶ್ರೀಧರ್ ರೆಡ್ಡಿ ಮತ್ತು ಉಂಡವಳ್ಳಿ ಶ್ರೀದೇವಿ ಅವರನ್ನು ಅನರ್ಹಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಕಚೇರಿ (ಸಿಎಂಒ) ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದೆ.

ಇದಲ್ಲದೆ, ತೆಲುಗು ದೇಶಂ ಪಕ್ಷ (ಟಿಡಿಪಿ) ಸಲ್ಲಿಸಿದ ಅರ್ಜಿಯ ಆಧಾರದ ಮೇಲೆ ಮದ್ದಲಗಿರಿ, ಕರಣಂ ಬಲರಾಮ್, ವಲ್ಲಭನೇನಿ ವಂಶಿ ಮತ್ತು ವಾಸುಪಲ್ಲಿ ಗಣೇಶ್ ಅವರನ್ನೂ ಕೂಡ ಅನರ್ಹಗೊಳಿಸಲಾಗಿದೆ.

ಅನರ್ಹಗೊಳಿಸುವ ವೇಳೆ 'ಅನರ್ಹಗೊಂಡ ಶಾಸಕರು ತಮ್ಮ ಮೂಲ ಪಕ್ಷದಿಂದ ಬೇರೆ ಪಕ್ಷಕ್ಕೆ ತಮ್ಮ ನಿಷ್ಠೆಯನ್ನು ಬದಲಾಯಿಸಿದ್ದಾರೆ, ಇದು ಪ್ರಜಾಪ್ರಭುತ್ವದ ರಚನೆ ಮತ್ತು ಮತದಾರರ ಆದೇಶವನ್ನು ದುರ್ಬಲಗೊಳಿಸುತ್ತದೆ ಎಂದು ಸ್ಪೀಕರ್ ಅಭಿಪ್ರಾಯಪಟ್ಟಿದ್ದಾರೆ.

ಇದೇ ವಿಚಾರವಾಗಿ ಮಾಹಿತಿ ನೀಡಿರುವ ಸಿಎಂ ಕಚೇರಿ 'ಶಾಸಕರ ವಿರುದ್ಧ ವೈಎಸ್‌ಆರ್‌ಸಿಪಿಯ ಅರ್ಜಿಯಲ್ಲಿ ಮಾಡಲಾದ ಆರೋಪಗಳು ಮತ್ತು ಸಾಕ್ಷ್ಯಗಳನ್ನು ಕೂಲಂಕಷವಾಗಿ ಪರಿಶೀಲಿಸಿದ ನಂತರ ಅನರ್ಹತೆ ನಿರ್ಧಾರಕ್ಕೆ ಬರಲಾಗಿದೆ. ಅನರ್ಹಗೊಂಡ ಸದಸ್ಯರು ಪಕ್ಷದ ಶಿಸ್ತು ಉಲ್ಲಂಘಿಸಿದ್ದಾರೆ ಮತ್ತು ಪಕ್ಷದ ತತ್ವಗಳಿಗೆ ವಿರುದ್ಧವಾದ ಚಟುವಟಿಕೆಗಳಲ್ಲಿ ತೊಡಗಿದ್ದಾರೆ ಎಂದು ಆರೋಪಿಸಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.