ಹಿಮಾಚಲ ಪ್ರದೇಶದಲ್ಲಿ ರಾಜ್ಯಸಭೆಗೆ ಅಡ್ಡಮತದಾನ: ಕಾಂಗ್ರೆಸ್ ನ ಅಭಿಷೇಕ್ ಮನು ಸಿಂಘ್ವಿಗೆ ಸೋಲು!
ರಾಜ್ಯಸಭೆಗೆ ಇಂದು ಚುನಾವಣೆ ನಡೆದಿದ್ದು ಹಿಮಾಚಲ ಪ್ರದೇಶದಲ್ಲಿ ಅಡ್ಡಮತದಾನದ ವರದಿಯಾಗಿದೆ.

ಶಿಮ್ಲಾ: ರಾಜ್ಯಸಭೆಗೆ ಇಂದು ಚುನಾವಣೆ ನಡೆದಿದ್ದು ಹಿಮಾಚಲ ಪ್ರದೇಶದಲ್ಲಿ ಅಡ್ಡಮತದಾನದ ವರದಿಯಾಗಿದೆ. ಅಡ್ಡಮತದಾನದ ಪರಿಣಾಮ ಅಭಿಷೇಕ್ ಮನು ಸಿಂಘ್ವಿ ಸೋಲು ಕಂಡಿದ್ದಾರೆ. ಸಿಂಘ್ವಿ ವಿರುದ್ಧ ಬಿಜೆಪಿ ಅಭ್ಯರ್ಥಿ ಹರ್ಷ್ ಮಹಾಜನ್ ಗೆದ್ದಿದ್ದಾರೆ.
ಇಬ್ಬರೂ ಅಭ್ಯರ್ಥಿಗಳ ಪರವಾಗಿ ತಲಾ 34 ಮತಗಳು ಚಲಾವಣೆಯಾಗಿತ್ತು. ಅಂತಿಮವಾಗಿ ಚೀಟಿ ಎತ್ತುವ ಮೂಲಕ ರಾಜ್ಯಸಭೆಗೆ ಆಯ್ಕೆ ಮಾಡಲಾಯಿತು.68 ಸದಸ್ಯ ಬಲದ ರಾಜ್ಯ ವಿಧಾನಸಭೆಯಲ್ಲಿ 40 ಶಾಸಕರನ್ನು ಹೊಂದಿರುವ ಮತ್ತು ಸ್ವತಂತ್ರರ ಬೆಂಬಲವನ್ನು ಪಡೆದಿರುವ ಕಾಂಗ್ರೆಸ್‌ಗೆ ಇದು ದೊಡ್ಡ ಆಘಾತವಾಗಿದೆ.
ಕಾಂಗ್ರೆಸ್ ಶಾಸಕರು ‘ಆತ್ಮಸಾಕ್ಷಿಯ ಮತ’ ಚಲಾಯಿಸುತ್ತಾರೆ ಎಂಬ ವಿಶ್ವಾಸದಲ್ಲಿದ್ದ ಬಿಜೆಪಿ ಪರವಾಗಿ ಒಂಬತ್ತು ಶಾಸಕರು ಮತ ಚಲಾಯಿಸಿದ್ದಾರೆ ಎಂದು ಫಲಿತಾಂಶ ಸ್ಪಷ್ಟಪಡಿಸಿದೆ. ಪ್ರಸ್ತುತ ಹಿಮಾಚಲಪ್ರದೇಶ ವಿಧಾನಸಭೆಯಲ್ಲಿ ಬಿಜೆಪಿ 25 ಶಾಸಕರನ್ನು ಹೊಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



