Gaganyaan: ಬಾಹ್ಯಾಕಾಶಕ್ಕೆ ಹಾರಲಿರುವ ಗಗನಯಾತ್ರಿಗಳ ಹೆಸರು ಘೋಷಿಸಿದ ಪ್ರಧಾನಿ ಮೋದಿ
ದೇಶದ ಚೊಚ್ಚಲ ಮಾನವ ಸಹಿತ ಬಾಹ್ಯಾಕಾಶ ಯಾನ ಗಗನಯಾನಗೆ ತರಬೇತಿ ಪಡೆಯುತ್ತಿರುವ ನಾಲ್ವರು ಗಗನಯಾತ್ರಿಗಳ ಹೆಸರನ್ನು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಪ್ರಕಟಿಸಿದ್ದಾರೆ.

ತಿರುವನಂತಪುರ: ದೇಶದ ಚೊಚ್ಚಲ ಮಾನವ ಸಹಿತ ಬಾಹ್ಯಾಕಾಶ ಯಾನ ಗಗನಯಾನಗೆ ತರಬೇತಿ ಪಡೆಯುತ್ತಿರುವ ನಾಲ್ವರು ಗಗನಯಾತ್ರಿಗಳ ಹೆಸರನ್ನು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಪ್ರಕಟಿಸಿದ್ದಾರೆ.
ಪ್ರಧಾನಮಂತ್ರಿಯವರು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ದ ಮೂರು ಪ್ರಮುಖ ತಾಂತ್ರಿಕ ಸೌಲಭ್ಯಗಳನ್ನು ಉದ್ಘಾಟಿಸಲು VSSC ಗೆ ಬಂದಿದ್ದರು. ಕೇರಳ ರಾಜ್ಯದ ರಾಜಧಾನಿ ಬಳಿಯ ತುಂಬಾದಲ್ಲಿರುವ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರಕ್ಕೆ ಭೇಟಿ ನೀಡಿದ್ದ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರು ಗಗನಯಾನ ಮಿಷನ್ ಗೆ ಆಯ್ಕೆಯಾಗಿರುವ ನಾಲ್ಕು ಮಂದಿ ಗಗನಯಾನಿಗಳ ಹೆಸರನ್ನು ಘೋಷಣೆ ಮಾಡಿದ್ದಾರೆ.
ಪ್ರಧಾನಿ ಮೋದಿ ಘೋಷಣೆ ಮಾಡಿದ ನಾಲ್ವರು ಗಗನಯಾತ್ರಿಗಳೆಂದರೆ ಪ್ರಶಾಂತ್ ಬಾಲಕೃಷ್ಣನ್ ನಾಯರ್, ಅಂಗದ್ ಪ್ರತಾಪ್, ಅಜಿತ್ ಕೃಷ್ಣನ್ ಮತ್ತು ಶುಭಾಂಶು ಶುಕ್ಲಾ.
ನಾಲ್ಕು ಮಂದಿ ಗಗನಯಾತ್ರಿಗಳಿಗೆ ಗಗನಯಾನದ ಕಿಟ್ ನೀಡುವ ಮೂಲಕ ಪ್ರಧಾನಿ ಮೋದಿ ಅವರಿಗೆ ಶುಭ ಕೋರಿದರು. ಅಲ್ಲದೆ ಅವರು ದೇಶದ 1.4 ಬಿಲಿಯನ್ ಜನರ ಆಕಾಂಕ್ಷೆಗಳನ್ನು ಒಳಗೊಂಡಿರುವ ನಾಲ್ಕು ಶಕ್ತಿಗಳು ಎಂದೂ ಬಣ್ಣಿಸಿದರು.
ಬಳಿಕ ಮಾತನಾಡಿದ ಪ್ರಧಾನಿ ಮೋದಿ, 'ನಾಲ್ಕು ದಶಕಗಳ ನಂತರ, ಒಬ್ಬ ಭಾರತೀಯನು ಬಾಹ್ಯಾಕಾಶಕ್ಕೆ ತೆರಳಲು ಸಿದ್ಧನಾಗಿದ್ದಾನೆ. "ಈ ಬಾರಿ ಕೌಂಟ್ಡೌನ್, ಸಮಯ ಮತ್ತು ರಾಕೆಟ್ ಕೂಡ ನಮ್ಮದಾಗಿರಲಿದೆ. ಗಗನಯಾನ ಮಾನವ ಹಾರಾಟದ ಮಿಷನ್ನಲ್ಲಿ ಬಳಸಲಾದ ಹೆಚ್ಚಿನ ಉಪಕರಣಗಳನ್ನು ಭಾರತದಲ್ಲಿ ತಯಾರಿಸಲಾಗುತ್ತದೆ ಎಂಬುದಕ್ಕೆ ನನಗೆ ಹೆಮ್ಮೆ ಮತ್ತು ಸಂತೋಷವಾಗಿದೆ ಎಂದರು.
ಅಂತೆಯೇ ದೇಶದ ಬಾಹ್ಯಾಕಾಶ ಕಾರ್ಯಕ್ರಮದಲ್ಲಿ ಮಹಿಳೆಯರು ವಹಿಸಿದ "ಪ್ರಮುಖ ಪಾತ್ರ" ವನ್ನು ಒತ್ತಿ ಹೇಳಿದ ಪ್ರಧಾನಿ ಮೋದಿ, ಚಂದ್ರಯಾನ - ಚಂದ್ರನ ಮಿಷನ್ ಮತ್ತು ಗಗನ್ಯಾನ್ ಅವರ ಕೊಡುಗೆ ಮತ್ತು ಭಾಗವಹಿಸುವಿಕೆ ಇಲ್ಲದೆ ಸಾಧ್ಯವಿಲ್ಲ. ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಯಶಸ್ಸು ದೇಶದ ಯುವ ಪೀಳಿಗೆಯಲ್ಲಿ ವೈಜ್ಞಾನಿಕ ಮನೋಧರ್ಮದ ಬೀಜಗಳನ್ನು ಬಿತ್ತುವುದಲ್ಲದೆ, ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹವಾದ ಅಭಿವೃದ್ಧಿಯ ದಾಪುಗಾಲುಗಳನ್ನು ಪ್ರದರ್ಶಿಸುವ ಮೂಲಕ 21 ನೇ ಶತಮಾನದಲ್ಲಿ ಕ್ರಿಯಾತ್ಮಕ ಜಾಗತಿಕ ಆಟಗಾರನಾಗಿ ಹೊರಹೊಮ್ಮಲು ಸಹಾಯ ಮಾಡುತ್ತಿದೆ ಎಂದು ಮೋದಿ ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



