ಸುಖ್ವಿಂದರ್ ಸಿಂಗ್ ರಾಜೀನಾಮೆ ನೀಡಿದ್ದಾರೆಯೇ? ಹಿಮಾಚಲ ಸಿಎಂ ಹೇಳಿದ್ದು ಹೀಗೆ...
ರಾಜ್ಯಸಭಾ ಚುನಾವಣೆಯಲ್ಲಿ ಕೆಲವು ಕಾಂಗ್ರೆಸ್ ಶಾಸಕರು ಅಡ್ಡ ಮತದಾನ ಮಾಡಿದ ನಂತರ ತಮ್ಮ ಸರ್ಕಾರ ಬಹುಮತ ಕಳೆದುಕೊಳ್ಳುವ ಅಪಾಯವಿದ್ದರೂ ಕೂಡ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ ಎಂದು ಸುಖ್ವಿಂದರ್ ಸಿಂಗ್ ಬುಧವಾರ ಹೇಳಿದ್ದಾರೆ.

ಶಿಮ್ಲಾ: ರಾಜ್ಯಸಭಾ ಚುನಾವಣೆಯಲ್ಲಿ ಕೆಲವು ಕಾಂಗ್ರೆಸ್ ಶಾಸಕರು ಅಡ್ಡ ಮತದಾನ ಮಾಡಿದ ನಂತರ ತಮ್ಮ ಸರ್ಕಾರ ಬಹುಮತ ಕಳೆದುಕೊಳ್ಳುವ ಅಪಾಯವಿದ್ದರೂ ಕೂಡ ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ ಎಂದು ಸುಖ್ವಿಂದರ್ ಸಿಂಗ್ ಬುಧವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನೊಬ್ಬ ಹೋರಾಟಗಾರ, ನಾನು ವಿನಮ್ರ ಕುಟುಂಬದಿಂದ ಬಂದವನು, ನಾವು ಈ ಯುದ್ಧವನ್ನು ಗೆಲ್ಲುತ್ತೇವೆ ಮತ್ತು ವಿಧಾನಸಭೆಯಲ್ಲೂ ಬಹುಮತವನ್ನು ಸಾಬೀತುಪಡಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಹಿಮಾಚಲ ಪ್ರದೇಶದಲ್ಲಿ ಮಂಗಳವಾರ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯ ಪರವಾಗಿ ಆರು ಕಾಂಗ್ರೆಸ್ ಶಾಸಕರು ಮತ ಚಲಾಯಿಸಿದ್ದು, ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಅವರ ಕಾರ್ಯಶೈಲಿಯಿಂದ ಅವರು ನಿರಾಶೆಗೊಂಡಿದ್ದಾರೆ ಎಂದು ಮೂಲಗಳು ಹೇಳಿವೆ.
ಆರು ಶಾಸಕರು ಅಡ್ಡ ಮತದಾನ ಮಾಡಿದ ನಂತರ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವದ ಬಿಕ್ಕಟ್ಟನ್ನು ಎದುರಿಸುತ್ತಿದೆ. "ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಕೆಲವು ಶಾಸಕರೊಂದಿಗೆ ನಾವು ಸಂಪರ್ಕದಲ್ಲಿದ್ದು, ತಮ್ಮ ಸರ್ಕಾರ ಐದು ವರ್ಷಗಳ ಆಡಳಿವನ್ನು ಪೂರ್ಣಗೊಳಿಸಲಿದೆ ಎಂದು ಸುಖ್ವಿಂದರ್ ಸಿಂಗ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.



