ಪಂಜಾಬ್ ನ ಜಲಂದರ್ ನಲ್ಲಿ ಒಂದೇ ಕುಟುಂಬದ 5 ಮಂದಿ ಸಾವು!
ಒಂದೇ ಕುಟುಂಬದ 5 ಮಂದಿ ಸಾವನ್ನಪ್ಪಿರುವ ಘಟನೆ ಪಂಜಾಬ್ ನ ಜಲಂಧರ್ ನಲ್ಲಿ ನಡೆದಿದೆ. ಅದಮ್ ಪುರ ಗ್ರಾಮದಲ್ಲಿ ಈ ಘಟನೆ ವರದಿಯಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.

ಚಂಡೀಗಢ: ಒಂದೇ ಕುಟುಂಬದ 5 ಮಂದಿ ಸಾವನ್ನಪ್ಪಿರುವ ಘಟನೆ ಪಂಜಾಬ್ ನ ಜಲಂಧರ್ ನಲ್ಲಿ ನಡೆದಿದೆ. ಅದಮ್ ಪುರ ಗ್ರಾಮದಲ್ಲಿ ಈ ಘಟನೆ ವರದಿಯಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
59 ವರ್ಷದ ಮನ್ ಮೋಹನ್ ಸಿಂಗ್, ಅವರ ಪತ್ನಿ, ಇಬ್ಬರು ಮಕ್ಕಳು, ಮೂರು ವರ್ಷದ ಮೊಮ್ಮಗಳ ಶವ ಪತ್ತೆಯಾಗಿದೆ.
ಮನಮೋಹನ್ ಅವರ ಶವ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇತರರ ಮೃತದೇಹ ಅದೇ ಕೋಣೆಯಲ್ಲಿ ಹಾಸಿಗೆಯ ಮೇಲೆ ಪತ್ತೆಯಾಗಿದೆ.
ಇದನ್ನೂ ಓದಿ: ಚಿತ್ರದುರ್ಗ: ಪಾಳು ಬಿದ್ದ ಮನೆಯಲ್ಲಿ 5 ಅಸ್ಥಿಪಂಜರ ಪತ್ತೆ!
ಮನಮೋಹನ್ ಸಿಂಗ್ ಅವರು ಬರೆದಿರುವ ಆತ್ಮಹತ್ಯೆ ಪತ್ರದಲ್ಲಿ ಕೆಲವು ಹಣಕಾಸಿನ ಸಮಸ್ಯೆಗಳಿಂದಾಗಿ ಈ ನಿರ್ಧಾರವನ್ನು ತೆಗೆದುಕೊಳ್ಳುತ್ತಿರುವುದಾಗಿ ಬರೆದಿದ್ದಾರೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ, ಜಲಂಧರ್ (ಗ್ರಾಮೀಣ) ಮುಖವಿಂದರ್ ಸಿಂಗ್ ಭುಲ್ಲರ್ ಹೇಳಿದ್ದಾರೆ.
ಪ್ರಾಥಮಿಕ ತನಿಖೆಯ ಪ್ರಕಾರ ಮನಮೋಹನ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ತನ್ನ ಕುಟುಂಬದ ಸದಸ್ಯರನ್ನು ಕತ್ತು ಹಿಸುಕಿ ಹತ್ಯೆ ಮಾಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. ದಂಪತಿಯ ಹಿರಿಯ ಮಗಳು ತನ್ನ ಅಪ್ರಾಪ್ತ ಮಗಳೊಂದಿಗೆ ತನ್ನ ಹೆತ್ತವರ ಮನೆಗೆ ಬಂದಿದ್ದರು. ಮನಮೋಹನ್ ಅವರ ಪುತ್ರ ಮದುವೆಯಾಗಿದ್ದು, ವಿದೇಶದಲ್ಲಿ ನೆಲೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


