ಮಧ್ಯಪ್ರದೇಶ: ಪತಿ, ಮಾವನನ್ನು ಗುಂಡಿಕ್ಕಿ ಕೊಂದ ಮಹಿಳೆ!
ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರು ತನ್ನ ಪತಿ ಮತ್ತು ಸೋದರ ಮಾವನನ್ನು ಗುಂಡಿಕ್ಕಿ ಕೊಂದಿದ್ದಾರೆ. ಸೋಮವಾರ ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಈ ಘಟನೆ ನಡೆದಿದೆ. ನಂತರ ಅಪರಾಧಕ್ಕೆ ಬಳಸಿದ ಪಿಸ್ತೂಲ್‌ನೊಂದಿಗೆ ಶರಣಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಉಜ್ಜಯನಿ: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರು ತನ್ನ ಪತಿ ಮತ್ತು ಸೋದರ ಮಾವನನ್ನು ಗುಂಡಿಕ್ಕಿ ಕೊಂದಿದ್ದಾರೆ. ಸೋಮವಾರ ಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಈ ಘಟನೆ ನಡೆದಿದೆ. ನಂತರ ಅಪರಾಧಕ್ಕೆ ಬಳಸಿದ ಪಿಸ್ತೂಲ್‌ನೊಂದಿಗೆ ಶರಣಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಜಿಲ್ಲಾ ಕೇಂದ್ರದಿಂದ ಸುಮಾರು 25 ಕಿಲೋಮೀಟರ್ ದೂರದಲ್ಲಿರುವ ಇಂಗೋರಿಯಾದಲ್ಲಿ ಬೆಳಿಗ್ಗೆ ಈ ಘಟನೆ ನಡೆದಿದ್ದು, ಮೃತರನ್ನು ಆರೋಪಿ ಸವಿತಾ ಅವರ ಪತಿ ರಾಧೇಶ್ಯಾಮ್ (41), ಮತ್ತು ಆಕೆಯ ಸೋದರ ಮಾವ ಧೀರಜ್ (47) ಎಂದು ಗುರುತಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
"ರಾಧೇಶ್ಯಾಮ್ ಸ್ಥಳದಲ್ಲೇ ಸಾವನ್ನಪ್ಪಿದರೆ, ಧೀರಜ್ ಬದ್‌ನಗರ ಆಸ್ಪತ್ರೆಯಲ್ಲಿ ಗುಂಡೇಟಿನ ಗಾಯದಿಂದ ಮೃತಪಟ್ಟಿದ್ದಾರೆ. ನಂತರ ಆರೋಪಿ ಪಿಸ್ತೂಲ್‌ನೊಂದಿಗೆ ಶರಣಾಗಿದ್ದಾರೆ ಎಂದು ಇಂಗೋರಿಯಾ ಪೊಲೀಸ್ ಠಾಣೆಯ ಉಸ್ತುವಾರಿ ಚಂದ್ರಿಕಾ ಸಿಂಗ್ ಯಾದವ್ ಹೇಳಿದರು.
ಅಂಗನವಾಡಿ ಕಾರ್ಯಕರ್ತೆಯಾಗಿರುವ ಸವಿತಾ (35) ಮೊದಲು ತನ್ನ ಪತಿಗೆ ನಂತರ ತನ್ನ ಸೋದರಮಾವನಿಗೆ ಗುಂಡು ಹಾರಿಸಿದ್ದಾಳೆ. ಮೇಲ್ನೋಟಕ್ಕೆ ಇದು ಆಸ್ತಿ ವಿವಾದದ ಕಾರಣ ಎಂದು ತೋರುತ್ತದೆ ಎಂದು ಯಾದವ್ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


