ಮೆಟ್ರೋ ರೈಲಿನಲ್ಲಿ ಸೀರೆ ಸಿಲುಕಿ ಮಹಿಳೆ ಸಾವು: ದೆಹಲಿ ಪೊಲೀಸರಿಂದ ಎಫ್ಐಆರ್
ದೆಹಲಿ ಮೆಟ್ರೋ ರೈಲಿಗೆ ಸೀರೆ ಸಿಲುಕಿ ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.

ನವದೆಹಲಿ: ದೆಹಲಿ ಮೆಟ್ರೋ ರೈಲಿಗೆ ಸೀರೆ ಸಿಲುಕಿ ಮಹಿಳೆ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಇಂದ್ರಲೋಕ್ ಮೆಟ್ರೋ ನಿಲ್ದಾಣದಲ್ಲಿ 35 ವರ್ಷದ ಮಹಿಳೆಯೊಬ್ಬರ ಸೀರೆ ಸಿಲುಕಿ, ರೈಲು ಎಳೆದೊಯ್ದ ಪರಿಣಾಮ ಆಕೆ ಮೃತಪಟ್ಟಿದ್ದರು.
ಸೆಕ್ಷನ್ 279 (ದುಡುಕಿನ ಚಾಲನೆ ಅಥವಾ ಸಾರ್ವಜನಿಕ ದಾರಿಯಲ್ಲಿ ಸವಾರಿ) ಸೆಕ್ಷನ್ 304A (ಅಜಾಗರೂಕತೆಯ ಪರಿಣಾಮ ಸಾವಿಗೆ ಕಾರಣವಾಗುವುದು) ರ ಅಡಿಯಲ್ಲಿ ನೇತಾಜಿ ಸುಭಾಷ್ ಚಂದ್ರಬೋಸ್ ಮೆಟ್ರೋ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಡೆಪ್ಯುಟಿ ಕಮಿಷನರ್ ಆಫ್ ಪೋಲೀಸ್ (ಮೆಟ್ರೋ) ರಾಮ್ ನಾಯಕ್ ಎಫ್ಐಆರ್ ದಾಖಲಿಸಿರುವುದನ್ನು ಖಚಿತಪಡಿಸಿದ್ದು, ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣವನ್ನು ದಾಖಲಿಸಲಾಗಿದೆ ಮತ್ತು ಈಗಾಗಲೇ ತನಿಖೆ ನಡೆಯುತ್ತಿದೆ ಎಂದು ಹೇಳಿದ್ದಾರೆ.
ಮೂಲಗಳ ಪ್ರಕಾರ, ಪೊಲೀಸರು ಘಟನೆಗೆ ಸಂಬಂಧಿಸಿದ ಸಿಸಿಟಿವಿ ದೃಶ್ಯಾವಳಿಗಳನ್ನು ಸಂಗ್ರಹಿಸಿದ್ದಾರೆ ಮತ್ತು ಯಾವ ಸಂದರ್ಭದಲ್ಲಿ ಘಟನೆ ನಡೆದಿದೆ ಎಂಬುದನ್ನು ಖಚಿತಪಡಿಸಿಕೊಳ್ಳಲು ಪ್ರಯತ್ನಿಸಿದ್ದಾರೆ.
ಮೇಲ್ನೋಟಕ್ಕೆ ಸಂತ್ರಸ್ತ ಮಹಿಳೆ ರೀನಾಳ ಬಟ್ಟೆ ರೈಲಿಗೆ ಸಿಲುಕಿ ಈ ದುರಂತ ಸಂಭವಿಸಿದೆ. ತೀವ್ರವಾಗಿ ಗಾಯಗೊಂಡಿದ್ದ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಆಕೆ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


