ಹೋಟೆಲ್ ಕೊಠಡಿಯಲ್ಲಿ ಐಐಟಿ-ಗುವಾಹಟಿ ವಿದ್ಯಾರ್ಥಿನಿ ಶವವಾಗಿ ಪತ್ತೆ!
ಐಐಟಿ ಗುವಾಹಟಿಯ ನಾಲ್ಕನೇ ವರ್ಷದ ವಿದ್ಯಾರ್ಥಿನಿಯೊಬ್ಬರು ಇಲ್ಲಿನ ಹೋಟೆಲ್‌ವೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ಗುವಾಹಟಿ: ಐಐಟಿ ಗುವಾಹಟಿಯ ನಾಲ್ಕನೇ ವರ್ಷದ ವಿದ್ಯಾರ್ಥಿನಿಯೊಬ್ಬರು ಇಲ್ಲಿನ ಹೋಟೆಲ್‌ವೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.
ಮೃತರು ತೆಲಂಗಾಣದವರು ಎನ್ನಲಾಗಿದೆ. ಆಕೆಯ ಮೂವರು ಬ್ಯಾಚ್ ಮೇಟ್ ಗಳು ಹೊಸ ವರ್ಷ ಆಚರಿಸಲು ಡಿಸೆಂಬರ್ 31ರ ಸಂಜೆ ಸಂಸ್ಥೆಯಿಂದ ಸುಮಾರು 25 ಕಿ.ಮೀ ದೂರದಲ್ಲಿರುವ ಗುವಾಹಟಿಗೆ ಬಂದಿದ್ದು, ಆನ್‌ಲೈನ್ ಮೂಲಕ ಹೋಟೆಲ್‌ನಲ್ಲಿ ಎರಡು ಕೊಠಡಿಗಳನ್ನು ಬುಕ್ ಮಾಡಿದ್ದರು. ಮಧ್ಯರಾತ್ರಿಯ ನಂತರ, ಅವರು ಹೋಟೆಲ್ ಗೆ ತೆರಳಿದ್ದಾರೆ. ಅವರು ಮಿತಿ ಮೀರಿ ಮದ್ಯ ಸೇವಿಸಿದ್ದರು ಎಂದು ಹೋಟೆಲ್ ಸಿಬ್ಬಂದಿ ಹೇಳಿದ್ದಾರೆ.
ಮರುದಿನ ಬೆಳಿಗ್ಗೆ ವಾಶ್‌ರೂಮ್‌ನಲ್ಲಿ ಹುಡುಗಿ ಪ್ರಜ್ಞಾಹೀನಳಾಗಿ ಬಿದ್ದಿರುವುದು ಅದೇ ಕೋಣೆಯಲ್ಲಿ ತಂಗಿದ್ದ ಗೆಳತಿಯರಿಗೆ ಗೊತ್ತಾಗಿದೆ. ನಂತರ ಆಕೆಯನ್ನು ಗುವಾಹಟಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ಆಕೆ ಸಾವನ್ನಪ್ಪಿರುವುದಾಗಿ ವೈದ್ಯರು ಪ್ರಕಟಿಸಿದ್ದಾರೆ. ತನಿಖೆ ಆರಂಭಿಸಿದ್ದು, ಆಕೆಯ ಎಲ್ಲಾ ಸ್ನೇಹಿತೆಯರನ್ನು ವಿಚಾರಣೆಗೊಳಪಡಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಮೃತ ವಿದ್ಯಾರ್ಥಿನಿಯನ್ನು ಐಶ್ವರ್ಯಾ ಪುಲ್ಲೂರಿ ಎಂದು ಗುರುತಿಸಲಾಗಿದೆ. ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಷನ್ಸ್ ವಿಭಾಗದ ಬಿ.ಟೆಕ್ ನಾಲ್ಕನೇ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಈ ಮಧ್ಯೆ ಐಐಟಿ-ಗುವಾಹಟಿ ವಿದ್ಯಾರ್ಥಿಯ ಕುಟುಂಬಕ್ಕೆ ಸಂತಾಪ ವ್ಯಕ್ತಪಡಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


