ದೆಹಲಿ: ಏಮ್ಸ್ ನಿರ್ದೇಶಕರ ಕಚೇರಿಯಲ್ಲಿ ಅಗ್ನಿ ಅವಘಡ, 7 ಅಗ್ನಿಶಾಮಕ ವಾಹನಗಳಿಂದ ರಕ್ಷಣಾ ಕಾರ್ಯಾಚರಣೆ
ದೆಹಲಿಯ ಏಮ್ಸ್‌ನ ನಿರ್ದೇಶಕರ ಕಚೇರಿಯಲ್ಲಿ ಗುರುವಾರ ಭಾರೀ ಅಗ್ನಿಅವಘಡ ಸಂಭವಿಸಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿದೆ.

ನವದೆಹಲಿ: ದೆಹಲಿಯ ಏಮ್ಸ್‌ನ ನಿರ್ದೇಶಕರ ಕಚೇರಿಯಲ್ಲಿ ಗುರುವಾರ ಭಾರೀ ಅಗ್ನಿಅವಘಡ ಸಂಭವಿಸಿದ್ದು, ಆತಂಕದ ವಾತಾವರಣ ನಿರ್ಮಾಣವಾಗಿದೆ.
ಎಐಐಎಂಎಸ್ ನಿರ್ದೇಶಕರ ಕಚೇರಿಯಲ್ಲಿ ಇಂದು ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದೆ. ಕೂಡಲೇ ಅಗ್ನಿಶಾಮಕ ಇಲಾಖೆಗೆ ಮಾಹಿತಿ ನೀಡಲಾಗಿದೆ. ಸುದ್ದಿ ತಿಳಿಯುತ್ತಿದ್ದಂತೆಯೇ 7 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಿಸಲು ಪ್ರಯತ್ನಿಸಿವೆ.
ಇಂದು (ಗುರುವಾರ) ಬೆಳಗ್ಗೆ 5:58 ರ ಸುಮಾರಿಗೆ ಏಮ್ಸ್ ಆಸ್ಪತ್ರೆಯಿಂದ ಬೆಂಕಿಯ ಬಗ್ಗೆ ಮಾಹಿತಿ ಬಂದಿತ್ತು. ಕೂಡಲೇ 7 ಅಗ್ನಿಶಾಮಕ ದಳದ ವಾಹನಗಳನ್ನು ಸ್ಥಳಕ್ಕೆ ಕಳುಹಿಸಲಾಯಿತು ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ: ಏಮ್ಸ್ ನಲ್ಲಿ ಬೋಧಕ ಸಿಬ್ಬಂದಿಗಳ ಕೊರತೆ ತೀವ್ರ
ನಿರ್ದೇಶಕರ ಕಟ್ಟಡದ ಎರಡನೇ ಮಹಡಿಯಲ್ಲಿರುವ ಕಚೇರಿಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಕಚೇರಿಯಲ್ಲಿದ್ದ ದಾಖಲೆಗಳು, ಪೀಠೋಪಕರಣಗಳು ಮತ್ತು ರೆಫ್ರಿಜರೇಟರ್ ನಾಶವಾಗಿವೆ ಎಂದು ವರದಿಗಳು ತಿಳಿಸಿವೆ.
ಈ ಅಗ್ನಿ ಅವಘಡದಲ್ಲಿ ಯಾವುದೇ ರೀತಿಯ ಅನಾಹುತ, ಸಾವು-ನೋವು ಸಂಭವಿಸಿಲ್ಲ ಎಂದು ಅಗ್ನಿಶಾಮಕ ದಳ ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


