ರಾಷ್ಟ್ರ ರಾಜಧಾನಿಯಲ್ಲಿ ವಾಂಟೆಡ್ ಹಿಜ್ಬುಲ್ ಭಯೋತ್ಪಾದಕನ ಬಂಧನ!
ದೆಹಲಿ ಪೊಲೀಸ್ ವಿಶೇಷ ದಳ ಗುರುವಾರ ರಾಷ್ಟ್ರ ರಾಜಧಾನಿಯಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ವಾಂಟೆಡ್ ಭಯೋತ್ಪಾದಕನನ್ನು ಬಂಧಿಸಿದೆ.

ನವದೆಹಲಿ: ದೆಹಲಿ ಪೊಲೀಸ್ ವಿಶೇಷ ದಳ ಗುರುವಾರ ರಾಷ್ಟ್ರ ರಾಜಧಾನಿಯಲ್ಲಿ ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಯ ವಾಂಟೆಡ್ ಭಯೋತ್ಪಾದಕನನ್ನು ಬಂಧಿಸಿದೆ. ಬಂಧಿತ ಭಯೋತ್ಪಾದಕನನ್ನು ಜಾವೇದ್ ಅಹ್ಮದ್ ಮ್ಯಾಟೊ ಎಂದು ಗುರುತಿಸಲಾಗಿದೆ. ಆತನ ತಲೆಗೆ 5 ಲಕ್ಷ ರೂ. ಇನಾಮು ಘೋಷಿಸಲಾಗಿತ್ತು.
ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ತಂಡವು ಆತನಿಗಾಗಿ ಶೋಧ ಕಾರ್ಯಾಚರಣೆ ಪ್ರಾರಂಭಿಸಿದ್ದಾಗಿ ದೆಹಲಿ ಪೊಲೀಸ್ ವಿಶೇಷ ದಳ ತಿಳಿಸಿದೆ. ಜಮ್ಮು-ಕಾಶ್ಮೀರದ ಸೊಪೋರ್ ನಿವಾಸಿಯಾದ ಮ್ಯಾಟೊ ಪಾಕಿಸ್ತಾನಕ್ಕೂ ತೆರಳಿದ್ದ ಎನ್ನಲಾಗಿದೆ.
ಕಳೆದ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಮೊದಲು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವೈರಲ್ ಆದ ವೀಡಿಯೊದಲ್ಲಿ, ಜಾವೇದ್ ಅವರ ಸಹೋದರ ರಯೀಸ್ ಮ್ಯಾಟೊ ಜಮ್ಮು ಮತ್ತು ಕಾಶ್ಮೀರದ ಸೋಪೋರ್‌ನಲ್ಲಿ ತ್ರಿವರ್ಣ ಧ್ವಜವನ್ನು ಬೀಸುತ್ತಿರುವುದು ವೈರಲ್ ಕಂಡುಬಂದಿತ್ತು.
ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಹಲವು ಭಯೋತ್ಪಾದಕ ಘಟನೆಗಳಲ್ಲಿ ಮ್ಯಾಟೊ ಪೊಲೀಸರಿಗೆ ಬೇಕಾಗಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


