ಸರ್ಕಾರಿ ಬಂಗಲೆ ತೆರವು ಆದೇಶ ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿ ಹಿಂಪಡೆದ ಮಹುವಾ
ಲೋಕಸಭೆಯಿಂದ ಉಚ್ಛಾಟಿತರಾಗಿರುವ ತೃಣಮೂಲ ಕಾಂಗ್ರೆಸ್ ನಾಯಕಿ ಮಹುವಾ ಮೊಯಿತ್ರಾ ಅವರು ಸರ್ಕಾರಿ ಬಂಗಲೆ ತೆರವು ಆದೇಶದ ವಿರುದ್ಧ ದೆಹಲಿ ಹೈಕೋರ್ಟ್ ಸಲ್ಲಿಸಿದ್ದ ಅರ್ಜಿಯನ್ನು ಗುರುವಾರ ಹಿಂಪಡೆದಿದ್ದಾರೆ.

ನವದೆಹಲಿ: ಲೋಕಸಭೆಯಿಂದ ಉಚ್ಛಾಟಿತರಾಗಿರುವ ತೃಣಮೂಲ ಕಾಂಗ್ರೆಸ್ ನಾಯಕಿ ಮಹುವಾ ಮೊಯಿತ್ರಾ ಅವರು ಸರ್ಕಾರಿ ಬಂಗಲೆ ತೆರವು ಆದೇಶದ ವಿರುದ್ಧ ದೆಹಲಿ ಹೈಕೋರ್ಟ್ ಸಲ್ಲಿಸಿದ್ದ ಅರ್ಜಿಯನ್ನು ಗುರುವಾರ ಹಿಂಪಡೆದಿದ್ದಾರೆ.
ಸಂಸದೆ ಸ್ಥಾನದಿಂದ ಉಚ್ಛಾಟನೆಗೊಂಡ ಬೆನ್ನಲ್ಲೇ ಜನವರಿ 7, 2024 ರೊಳಗೆ ಸರ್ಕಾರಿ ನಿವಾಸ ಖಾಲಿ ಮಾಡುವಂತೆ ಕೇಂದ್ರ ಸರ್ಕಾರ ಮಹುವಾ ಮೊಯಿತ್ರಾ ಅವರಿಗೆ ನೋಟಿಸ್ ನೀಡಿತ್ತು. ಇದನ್ನು ಪ್ರಶ್ನಿಸಿ ಟಿಎಂಸಿ ನಾಯಕಿ ಹೈಕೋರ್ಟ್ ಮೊರೆ ಹೋಗಿದ್ದರು.
ಇಂದು ತಮ್ಮ ಅರ್ಜಿ ಹಿಂಪಡೆದ ಮೊಯಿತ್ರಾ ಪರ ವಕೀಲ ಪಿನಾಕಿ ಮಿಶ್ರಾ ಅವರು, ಮುಂಬರುವ ಲೋಕಸಭೆ ಚುನಾವಣೆಯವರೆಗೆ ಟಿಎಂಸಿ ನಾಯಕಿಗೆ ಬಂಗಲೆಯಲ್ಲಿ ಉಳಿಯಲು ಅನುಮತಿ ಕೋರಿ ಕೇಂದ್ರ ಸರ್ಕಾರದ ಎಸ್ಟೇಟ್ ನಿರ್ದೇಶನಾಲಯಕ್ಕೆ ಮನವಿ ಮಾಡುವುದಾಗಿ ನ್ಯಾಯಮೂರ್ತಿ ಸುಬ್ರಮಣ್ಯ ಪ್ರಸಾದ್ ಅವರಿಗೆ ತಿಳಿಸಿದ್ದಾರೆ.
ಬಳಿಕ ಅರ್ಜಿ ಹಿಂತೆಗೆದುಕೊಳ್ಳಲು ಅನುಮತಿ ನೀಡಿದ ಹೈಕೋರ್ಟ್, ಕಾನೂನು ಪ್ರಕಾರ ಸರ್ಕಾರ ಈ ವಿಷಯದ ಬಗ್ಗೆ ಕ್ರಮ ತೆಗೆದುಕೊಳ್ಳುತ್ತದೆ ಎಂದು ಹೇಳಿದೆ.
ಲೋಕಸಭೆಯಲ್ಲಿ ಪ್ರಶ್ನೆ ಕೇಳುವುದಕ್ಕೆ ಲಂಚ ಪಡೆದ ಆರೋಪದ ಮೇಲೆ ಮಹುವಾ ಮೊಯಿತ್ರಾ ಅವರನ್ನು ಸಂಸದ ಸ್ಥಾನದಿಂದ ಉಚ್ಚಾಟಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


