ರಾಜಸ್ಥಾನ ಮಾಜಿ ಸಚಿವ ಭಯಾ ವಿರುದ್ಧ ಮೂರೇ ದಿನದಲ್ಲಿ ಎರಡನೇ ಕೇಸ್ ದಾಖಲು
ಹಿಂದಿನ ಅಶೋಕ್ ಗೆಹ್ಲೋಟ್ ಸರ್ಕಾರದಲ್ಲಿ ಸಚಿವರಾಗಿದ್ದ ಪ್ರಮೋದ್ ಜೈನ್ ಭಯಾ ಮತ್ತು ಇತರ ಮೂವರ ವಿರುದ್ಧ ಬುಧವಾರ ಸಂಜೆ ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ವಂಚನೆ, ಕ್ರಿಮಿನಲ್ ಪಿತೂರಿ ಮತ್ತು ಸುಲಿಗೆ ಪ್ರಕರಣ ದಾಖಲಿಸಲಾಗಿದೆ...

ಕೋಟಾ: ಹಿಂದಿನ ಅಶೋಕ್ ಗೆಹ್ಲೋಟ್ ಸರ್ಕಾರದಲ್ಲಿ ಸಚಿವರಾಗಿದ್ದ ಪ್ರಮೋದ್ ಜೈನ್ ಭಯಾ ಮತ್ತು ಇತರ ಮೂವರ ವಿರುದ್ಧ ಬುಧವಾರ ಸಂಜೆ ಐಪಿಸಿಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ವಂಚನೆ, ಕ್ರಿಮಿನಲ್ ಪಿತೂರಿ ಮತ್ತು ಸುಲಿಗೆ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರಾಜಸ್ಥಾನ ಮಾಜಿ ಗಣಿಗಾರಿಕೆ ಸಚಿವ ಭಯಾ ವಿರುದ್ಧ ಬರಾನ್ ನಗರ ಪೊಲೀಸ್ ಠಾಣೆಯಲ್ಲಿ ಇಂದು ಕೇಸ್ ದಾಖಲಿಸಲಾಗಿದೆ. ಇದಕ್ಕು ಮುನ್ನ ಭಯಾ ವಿರುದ್ಧ ಜನವರಿ 1 ರಂದು ಅಂತಾ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಪಿತೂರಿ ಮತ್ತು ನಕಲಿ ದಾಖಲೆ ಸೃಷ್ಟಿಸಿದ ಆರೋಪದ ಮೇಲೆ ಪ್ರತ್ಯೇಕ ಪ್ರಕರಣ ದಾಖಲಿಸಲಾಗಿತ್ತು. ಪ್ರಸ್ತುತ ಈ ಪ್ರಕರಣದ ತನಿಖೆ ನಡೆಯುತ್ತಿದೆ.
ಮಾಜಿ ಸಚಿವರ ಪರವಾಗಿ ಅಂಕಿತ್ ಜಿಯಾನ್ ಅಲಿಯಾಸ್ ಬೋರ್ಡಿಯಾ, ಸುನೀಲ್ ಯಾದವ್, ಶರದ್ ಶರ್ಮಾ ಮತ್ತು ನರೇಶ್ ತಂತ್ರಿಕ್ ಅವರು ಅಕ್ರಮ ಗಣಿಗಾರಿಕೆ ಮತ್ತು ಮಣ್ಣು ಸಾಗಣೆ ಮಾಡಿದ್ದಾರೆ ಎಂದು ಆರೋಪಿಸಿ ಬರಾನ್ ಮುನ್ಸಿಪಲ್ ಕೌನ್ಸಿಲ್ ವಿರೋಧ ಪಕ್ಷದ ನಾಯಕ ಮತ್ತು ಬಿಜೆಪಿ ವಾರ್ಡ್ ಕೌನ್ಸಿಲರ್ ದಿಲೀಪ್ ಶಕಿವಾಲ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ. ದೂರಿನ ಆಧಾರದ ಮೇಲೆ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ.
ಪೊಲೀಸರು ಭಯ ಮತ್ತು ಇತರ ನಾಲ್ವರ ವಿರುದ್ಧ ಐಪಿಸಿಯ ಸೆಕ್ಷನ್ 420 (ವಂಚನೆ ಮತ್ತು ಅಪ್ರಾಮಾಣಿಕತೆ), 384 (ಸುಲಿಗೆ), 413 (ಕದ್ದ ಆಸ್ತಿಯ ವ್ಯವಹಾರ), 426 (ಕಿಡಿಗೇಡಿತನ), 379 (ಕಳ್ಳತನ) ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎಂದು ಬರನ್ ನಗರ ಪೊಲೀಸ್ ಠಾಣೆಯ ಎಸ್‌ಎಚ್‌ಒ ರಾಮ್‌ವಿಲಾಸ್ ಮೀನಾ ಅವರು ಗುರುವಾರ ತಿಳಿಸಿದ್ದಾರೆ.
ದೂರಿನಲ್ಲಿನ ಆರೋಪಗಳನ್ನು ಪರಿಶೀಲಿಸಲು, ಸಂಬಂಧಿಸಿದ ದಾಖಲೆಗಳನ್ನು ಇಲಾಖೆಗಳಿಂದ ಇನ್ನೂ ಸಂಗ್ರಹಿಸಬೇಕಾಗಿದೆ ಮತ್ತು ಸಂಬಂಧಪಟ್ಟ ಅಧಿಕಾರಿಗಳು ಮತ್ತು ಭಾಗಿಯಾಗಿರುವ ವ್ಯಕ್ತಿಗಳ ಹೇಳಿಕೆಗಳನ್ನು ಇನ್ನೂ ದಾಖಲಿಸಬೇಕಾಗಿದೆ ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


