ಉಗ್ರರು ಅಡಗಿರುವ ಶಂಕೆ: ಶೋಪಿಯಾನ್ ಜಿಲ್ಲೆಯಲ್ಲಿ ಎನ್ಕೌಂಟರ್ ಆರಂಭ
ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಎನ್ಕೌಂಟರ್ ಆರಂಭಿಸಿವೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಎನ್ಕೌಂಟರ್ ಆರಂಭಿಸಿವೆ.
ಶೋಪಿಯಾನ್ ಜಿಲ್ಲೆಯ ಚೋಟಿಗಮ್ ಪ್ರದೇಶದಲ್ಲಿ ಪ್ರಸ್ತುತ ಭಾರತೀಯ ಸೇನೆ ಮತ್ತು ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ ಮುಂದುವರೆದಿದೆ.
ಪೊಲೀಸ್, ಸೇನೆ ಮತ್ತು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಅಧಿಕಾರಿಗಳು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಈ ಕುರಿತು ಹೆಚ್ಚಿನ ವಿವರಗಳಿಗಾಗಿ ನಿರೀಕ್ಷಿಸಲಾಗುತ್ತಿದೆ" ಎಂದು ಕಾಶ್ಮೀರ ವಲಯ ಪೊಲೀಸರು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದಾರೆ.
ಮತ್ತೊಂದೆಡೆ, ಜಮ್ಮು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಹಡಿಗಾಂ ಎಂಬಲ್ಲಿ ಬುಧವಾರ ರಾತ್ರಿಯಿಂದಲೇ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿತ್ತು. ಈ ಎನ್‌ಕೌಂಟರ್ ಗುರುವಾರವೂ ಮುಂದುವರೆದಿತ್ತು.
ಇದನ್ನೂ ಓದಿ: ಜಮ್ಮು-ಕಾಶ್ಮೀರ: ಮಸೀದಿಯಲ್ಲಿ ಉಗ್ರರಿಂದ ಗುಂಡಿನ ದಾಳಿ, ಪ್ರಾರ್ಥನೆ ಸಲ್ಲಿಸುತ್ತಿದ್ದ ನಿವೃತ್ತ ಪೊಲೀಸ್ ಅಧಿಕಾರಿ ಸಾವು!
ಉಗ್ರರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ಮತ್ತು ಸೇನಾ ಪಡೆ ಜಂಟಿ ಕಾರ್ಯಾಚರಣೆ ನಡೆಸಿದ್ದವು. ಸೇನಾ ತಂಡಗಳು ಶಂಕಿತ ಸ್ಥಳಕ್ಕೆ ತಲುಪಿದ್ದ ವೇಳೆ ಏಕಾಏಕಿ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಇದಕ್ಕೆ ಪ್ರತಿಯಾಗಿ ಸೇನೆಯೂ ಗುಂಡಿನ ದಾಳಿ ನಡೆಸಿತ್ತು.
ಇದಕ್ಕೂ ಮುನ್ನ ಡಿಸೆಂಬರ್ 22 ರಂದು ಜಮ್ಮುವಿನ ಪೂಂಚ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಐವರು ಸೈನಿಕರು ಹುತಾತ್ಮರಾಗಿದ್ದರು. ಇದರ ಬೆನ್ನಲ್ಲೇ ಮೂವರು ನಾಗರಿಕರು ಕೂಡ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವುದು ವರದಿಯಾಗಿತ್ತು.
ಅಂಕಿ-ಅಂಶಗಳ ಪ್ರಕಾರ 2023 ರಲ್ಲಿ, ಜಮ್ಮು ಮತ್ತು ಕಾಶ್ಮೀರದಲ್ಲಿ 87 ಕ್ಕೂ ಹೆಚ್ಚು ಉಗ್ರಗಾಮಿಗಳು, 33 ಭದ್ರತಾ ಪಡೆಗಳ ಸಿಬ್ಬಂದಿ ಮತ್ತು 12 ಕ್ಕೂ ಹೆಚ್ಚು ನಾಗರಿಕರು ಸೇರಿದಂತೆ ಉಗ್ರ ದಾಳಿಗಳಲ್ಲಿ 134 ಕ್ಕೂ ಹೆಚ್ಚು ಸಾವುಗಳು ಸಂಭವಿಸಿವೆ
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


