ಮಹಾರಾಷ್ಟ್ರ: ಕರ್ತವ್ಯ ನಿರತ ಪೊಲೀಸ್ ಗೆ ಕಪಾಳ ಮೋಕ್ಷ; ಬಿಜೆಪಿ ಶಾಸಕ Sunil Kamble ವಿರುದ್ಧ ಪ್ರಕರಣ ದಾಖಲು
ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಗೆ ಕಪಾಳ ಮೋಕ್ಷ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಬಿಜೆಪಿ ಶಾಸಕ Sunil Kamble ವಿರುದ್ಧ ಪ್ರಕರಣ ದಾಖಲಾಗಿದೆ.

ಮುಂಬೈ: ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿಗೆ ಕಪಾಳ ಮೋಕ್ಷ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಬಿಜೆಪಿ ಶಾಸಕ Sunil Kamble ವಿರುದ್ಧ ಪ್ರಕರಣ ದಾಖಲಾಗಿದೆ.
ಮಹಾರಾಷ್ಟ್ರದ ಪುಣೆಯಲ್ಲಿರುವ ಸಸೂನ್ ಆಸ್ಪತ್ರೆಯಲ್ಲಿ ಆಯೋಜಿಸಿದ ಕಾರ್ಯಕ್ರಮದ ವೇಳೆ ಸುನೀಲ್ ಕಾಂಬ್ಳೆ ಅವರು ಪೊಲೀಸ್ ಅಧಿಕಾರಿಯೊಬ್ಬರ ಕಪಾಳಕ್ಕೆ ಹೊಡೆದಿದ್ದಾರೆ. ಸುನೀಲ್ ಕಾಂಬ್ಳೆ ಅವರು ವೇದಿಕೆಯಿಂದ ಇಳಿಯುತ್ತಿದ್ದ ವೇಳೆ ಸುನೀಲ್ ಕಾಂಬ್ಳೆ ಅವರ ಮೈಯನ್ನು ಪೊಲೀಸ್ ಅಧಿಕಾರಿ ಮುಟ್ಟಿದ್ದಾರೆ. ಇದೇ ಕಾರಣಕ್ಕೆ ಕುಪಿತಗೊಂಡ ಸುನೀಲ್ ಕಾಂಬ್ಳೆ, ಅವರ ಕಪಾಳಕ್ಕೆ ಹೊಡೆದಿದ್ದಾರೆ. ಈ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಮುಖ್ಯ ಅತಿಥಿಯಾಗಿದ್ದರು. ಅವರ ಸಮ್ಮುಖದಲ್ಲಿಯೇ ಇಂತಹ ಘಟನೆ ನಡೆದಿದೆ.
ಬಿಜೆಪಿ ಶಾಸಕರ ದುರ್ನಡತೆಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.
ಹೊಡೆದಿಲ್ಲ, ತಳ್ಳಿದೆ ಎಂದು ಸ್ಪಷ್ಟನೆ
ಇನ್ನು ಕಪಾಳಮೋಕ್ಷ ಪ್ರಕರಣ ವೈರಲ್ ಆಗುತ್ತಿದ್ದಂತೆಯೇ ಈ ಕುರಿತು ಸ್ಪಷ್ಟನೆ ನೀಡಿರುವ ಶಾಸಕ ಸುನೀಲ್ ಕಾಂಬ್ಳೆ, “ನಾನು ಪೊಲೀಸ್ ಅಧಿಕಾರಿಗೆ ಹೊಡೆದಿಲ್ಲ. ವೇದಿಕೆ ಮೇಲಿನಿಂದ ಇಳಿಯುವಾಗ ಪೊಲೀಸ್ ಅಧಿಕಾರಿಯು ನನ್ನ ಮೈಮೇಲೆ ಬಿದ್ದರು. ನಾನು ಆಗ ಅವರನ್ನು ತಳ್ಳಿದೆ ಅಷ್ಟೆ. ಅವರ ಮೇಲೆ ಕೈ ಮಾಡಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ. ಆದರೆ, ಪೊಲೀಸ್ ಅಧಿಕಾರಿಯ ಕಪಾಳಕ್ಕೆ ಹೊಡೆಯುವ ದೃಶ್ಯ ವಿಡಿಯೊದಲ್ಲಿ ಸೆರೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


