'ರಾಮ ಮಂದಿರ ಲೋಕಾರ್ಪಣೆ ದಿನ ಮುಸ್ಲಿಂ ಸಮುದಾಯದವರು ಮನೆಯಲ್ಲಿಯೇ ಇರಿ, ರೈಲಿನಲ್ಲಿ ಪ್ರಯಾಣಿಸಬೇಡಿ'
ಅಯೋಧ್ಯೆಯ ರಾಮ ಮಂದಿರದ ಶಂಕುಸ್ಥಾಪನೆ ಸಮಾರಂಭಕ್ಕೂ ಮೊದಲು, ಆಲ್ ಇಂಡಿಯಾ ಡೆಮಾಕ್ರಟಿಕ್ ಫ್ರಂಟ್ ಮುಖ್ಯಸ್ಥ ಮತ್ತು ಅಸ್ಸಾಂನ ಸಂಸದ ಬದ್ರುದ್ದೀನ್ ಅಜ್ಮಲ್ ಅವರು, ದೇಶದ ಮುಸ್ಲಿಂ ಸಮುದಾಯವನ್ನು ಜನವರಿ 22 ರಂದು ಮನೆಯಲ್ಲಿಯೇ ಇರುವಂತೆ ಕೇಳಿದ್ದಾರೆ ಮತ್ತು ಆ ದಿನದಂದು ರೈಲಿನಲ್ಲಿ ಪ್ರಯಾಣಿಸದಂತೆ ಮನವಿ ಮಾಡಿದ್ದಾರೆ.

ನವದೆಹಲಿ: ಅಯೋಧ್ಯೆಯ ರಾಮ ಮಂದಿರದ ಶಂಕುಸ್ಥಾಪನೆ ಸಮಾರಂಭಕ್ಕೂ ಮೊದಲು, ಆಲ್ ಇಂಡಿಯಾ ಡೆಮಾಕ್ರಟಿಕ್ ಫ್ರಂಟ್ ಮುಖ್ಯಸ್ಥ ಮತ್ತು ಅಸ್ಸಾಂನ ಸಂಸದ ಬದ್ರುದ್ದೀನ್ ಅಜ್ಮಲ್ ಅವರು, ದೇಶದ ಮುಸ್ಲಿಂ ಸಮುದಾಯವನ್ನು ಜನವರಿ 22 ರಂದು ಮನೆಯಲ್ಲಿಯೇ ಇರುವಂತೆ ಕೇಳಿದ್ದಾರೆ ಮತ್ತು ಆ ದಿನದಂದು ರೈಲಿನಲ್ಲಿ ಪ್ರಯಾಣಿಸದಂತೆ ಮನವಿ ಮಾಡಿದ್ದಾರೆ.
ಅಜ್ಮಲ್ ಅವರ ಹೇಳಿಕೆಯನ್ನು ಉಲ್ಲೇಖಿಸಿ ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದ್ದು, ನಮ್ಮ 'ಸಮುದಾಯದ ಜನರನ್ನು ಉಳಿಸಿ' ಎಂದು ಮನವಿ ಮಾಡುತ್ತಿದ್ದಾರೆ ಎಂದಿದೆ. 'ಪರಿಸ್ಥಿತಿ ಮತ್ತಷ್ಟು ಕೆಟ್ಟದಾಗಬಹುದು. ಬಾಬರಿ ಮಸೀದಿಯನ್ನು ಕೆಡವಿದಾಗ ಮತ್ತು ಹಿಂಸಾಚಾರ ಭುಗಿಲೆದ್ದಾಗ ಮತ್ತು ಜನರನ್ನು ಥಳಿಸಿದ ಮಾದರಿಯಲ್ಲಿಯೇ ಏನಾದರೂ ಸಂಭವಿಸಬಹುದು' ಎಂದು ಅವರು ಹೇಳಿದರು.
ಬಾರ್ಪೇಟಾದಲ್ಲಿ ಮದರಸಾದ ಶಂಕುಸ್ಥಾಪನೆ ಸಮಾರಂಭದಲ್ಲಿ ಜನರನ್ನುದ್ದೇಶಿಸಿ ಮಾತನಾಡಿದ ಅವರು, 'ಭಾರತದಾದ್ಯಂತ ಸಾವಿರಾರು ಜನರು ಬಸ್ ಮತ್ತು ರೈಲುಗಳಲ್ಲಿ ಅಯೋಧ್ಯೆಗೆ ಪ್ರಯಾಣಿಸುತ್ತಾರೆ. ಈ ವೇಳೆ ಏನು ಬೇಕಾದರೂ ಆಗಬಹುದು. ಆದ್ದರಿಂದ ನಮ್ಮ ದೇಶದಲ್ಲಿರುವ ಮುಸ್ಲಿಮರು ರೈಲಿನಲ್ಲಿ ಪ್ರಯಾಣಿಸುವುದನ್ನು ತಪ್ಪಿಸಬೇಕು' ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


