ಮುಂಬೈ ಎಟಿಎಸ್ ನಿಂದ 6 ಮಂದಿಯ ಬಂಧನ, ಶಸ್ತ್ರಾಸ್ತ್ರ, ಮದ್ದುಗುಂಡು ವಶಕ್ಕೆ
ಮುಂಬೈ ನ ಭಯೋತ್ಪಾದನೆ ನಿಗ್ರಹ ದಳ 6 ಮಂದಿಯನ್ನು ಬಂಧಿಸಿದ್ದು, ಬಂಧಿತರಿಂದ ಶಸ್ತ್ರಾಸ್ತ್ರ, ಮದ್ದುಗುಂಡುಗಳನ್ನು ವಶಕ್ಕೆ ಪಡೆದಿದ್ದಾರೆ.

ಮುಂಬೈ: ಮುಂಬೈ ನ ಭಯೋತ್ಪಾದನೆ ನಿಗ್ರಹ ದಳ 6 ಮಂದಿಯನ್ನು ಬಂಧಿಸಿದ್ದು, ಬಂಧಿತರಿಂದ ಶಸ್ತ್ರಾಸ್ತ್ರ, ಮದ್ದುಗುಂಡುಗಳನ್ನು ವಶಕ್ಕೆ ಪಡೆದಿದ್ದಾರೆ.
ನಗರದ ಬೊರಿವಲಿ ಪ್ರದೇಶದಲ್ಲಿ ಆರೋಪಿಗಳನ್ನು ಬಂಧಿಸಲಾಗಿದ್ದು, ಇವರು ದೆಹಲಿಯ ನಿವಾಸಿಗಳಾಗಿದ್ದಾರೆಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
"ಭಯೋತ್ಪಾದನಾ ನಿಗ್ರಹ ದಳದ ಮುಂಬೈ ಘಟಕವು ಮುಂಬೈನ ಬೊರಿವಲಿ ಪ್ರದೇಶದಲ್ಲಿನ ಅತಿಥಿ ಗೃಹದ ಮೇಲೆ ದಾಳಿ ನಡೆಸಿತ್ತು. 6 ಜನರನ್ನು ಬಂಧಿಸಿ ಅವರಿಂದ 3 ಬಂದೂಕುಗಳು ಮತ್ತು 36 ಜೀವಂತ ಕಾಟ್ರಿಡ್ಜ್‌ಗಳನ್ನು ವಶಪಡಿಸಿಕೊಂಡಿದೆ" ಎಂದು ಎಟಿಎಸ್ ತಿಳಿಸಿದೆ. ಪ್ರಕರಣದ ಹೆಚ್ಚಿನ ತನಿಖೆ ನಡೆಯುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


