ದೇಶ

ಕೋವಿಡ್-19: ಕಳೆದ 24 ಗಂಟೆಗಳಲ್ಲಿ ಆರು ಮಂದಿ ಸಾವು; ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ

ಭಾರತದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 475 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 3,919 ರಷ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ.

ಕೋವಿಡ್-19: ಕಳೆದ 24 ಗಂಟೆಗಳಲ್ಲಿ ಆರು ಮಂದಿ ಸಾವು; ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ
ಪ್ರಾತಿನಿಧಿಕ ಚಿತ್ರ
Published On :

ನವದೆಹಲಿ: ಭಾರತದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 475 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 3,919 ರಷ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ.

ಬೆಳಿಗ್ಗೆ 8 ಗಂಟೆಗೆ ಲಭ್ಯವಾದ ನವೀಕರಿಸಿದ ಅಂಕಿಅಂಶಗಳ ಪ್ರಕಾರ, ಕರ್ನಾಟಕದಲ್ಲಿ ಮೂವರು, ಛತ್ತೀಸ್‌ಗಢದಲ್ಲಿ ಇಬ್ಬರು ಮತ್ತು ಅಸ್ಸಾಂನಲ್ಲಿ ಒಬ್ಬರು ಸೇರಿದಂತೆ ದೇಶದಾದ್ಯಂತ ಆರು ಮಂದಿ ಸಾವಿಗೀಡಾಗಿದ್ದಾರೆ. 

ಸಚಿವಾಲಯದ ಪ್ರಕಾರ, 2020ರ ಆರಂಭದಲ್ಲಿ ಸಾಂಕ್ರಾಮಿಕ ರೋಗವು ಪ್ರಾರಂಭವಾದಾಗಿನಿಂದ, ದೇಶದಾದ್ಯಂತ 4.5 ಕೋಟಿಗೂ ಹೆಚ್ಚು ಜನರು ಸೋಂಕಿಗೆ ಒಳಗಾಗಿದ್ದಾರೆ ಮತ್ತು 5.3 ಲಕ್ಷಕ್ಕೂ ಹೆಚ್ಚು ಜನರು ಸಾವಿಗೀಡಾಗಿದ್ದಾರೆ.

ಸದ್ಯ ಈವರೆಗೆ 4.4 ಕೋಟಿಗೂ ಹೆಚ್ಚು ಮಂದಿ ಕೋವಿಡ್‌ನಿಂದ ಚೇತರಿಸಿಕೊಂಡಿದ್ದಾರೆ. ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.81 ರಷ್ಟಿದೆ.

ಸಚಿವಾಲಯದ ವೆಬ್‌ಸೈಟ್ ಪ್ರಕಾರ, ದೇಶದಲ್ಲಿ ಈವರೆಗೆ 220.67 ಕೋಟಿ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.