ದೇಶ

ಜನವರಿ 31 ರಿಂದ ಫೆಬ್ರವರಿ 9ರ ವರೆಗೆ ಸಂಸತ್ ಬಜೆಟ್ ಅಧಿವೇಶನ ನಡೆಯುವ ಸಾಧ್ಯತೆ

ಸಂಸತ್ ಬಜೆಟ್ ಅಧಿವೇಶನವು ಜನವರಿ 31 ರಿಂದ ಫೆಬ್ರವರಿ 9 ರ ವರೆಗೆ ನಡೆಯುವ ಸಾಧ್ಯತೆಯಿದೆ ಎಂದು ಮೂಲಗಳು ಗುರುವಾರ ತಿಳಿಸಿವೆ.

ಜನವರಿ 31 ರಿಂದ ಫೆಬ್ರವರಿ 9ರ ವರೆಗೆ ಸಂಸತ್ ಬಜೆಟ್ ಅಧಿವೇಶನ ನಡೆಯುವ ಸಾಧ್ಯತೆ
ಲೋಕಸಭೆ
Published On :

ನವದೆಹಲಿ: ಸಂಸತ್ ಬಜೆಟ್ ಅಧಿವೇಶನವು ಜನವರಿ 31 ರಿಂದ ಫೆಬ್ರವರಿ 9 ರ ವರೆಗೆ ನಡೆಯುವ ಸಾಧ್ಯತೆಯಿದೆ ಎಂದು ಮೂಲಗಳು ಗುರುವಾರ ತಿಳಿಸಿವೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜನವರಿ 31 ರಂದು ಜಂಟಿ ಸದನ ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಅವರು ಹೇಳಿದ್ದಾರೆ.

ಫೆಬ್ರವರಿ 1 ರಂದು ಕೇಂದ್ರ ಸರ್ಕಾರ 'ಮಧ್ಯಂತರ ಬಜೆಟ್' ಮಂಡಿಸಲಿದೆ. ನಂತರ ಹೊಸ ಸರ್ಕಾರ ಪೂರ್ಣ ಪ್ರಮಾಣದ ಬಜೆಟ್ ಮಂಡಿಸಲಿದೆ.

17ನೇ ಲೋಕಸಭೆಯ ಅವಧಿ ಜೂನ್ 16 ರಂದು ಕೊನೆಗೊಳ್ಳುವುದರಿಂದ, ಇದು ಸಂಸತ್ತಿನ ಕೊನೆಯ ಅಧಿವೇಶನವಾಗಿದೆ.

2019 ರಲ್ಲಿ, ಮಾರ್ಚ್ 10 ರಂದು ಲೋಕಸಭೆ ಚುನಾವಣೆ ಘೋಷಿಸಲಾಗಿತ್ತು ಮತ್ತು ಏಪ್ರಿಲ್ 11 ಮತ್ತು ಮೇ 19 ರ ನಡುವೆ ಏಳು ಹಂತಗಳಲ್ಲಿ ಮತದಾನ ನಡೆದಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.