ಮಾನಹಾನಿ ಕೇಸ್: ರೂಪಾ ಕ್ಷಮೆ ಕೇಳಬೇಕು- 'ಸುಪ್ರೀಂ'ನಲ್ಲಿ ರೋಹಿಣಿ ಸಿಂಧೂರಿ ಬಿಗಿಪಟ್ಟು; ಫೆ.16ಕ್ಕೆ ಮುಂದಿನ ವಿಚಾರಣೆ
ಸಾಮಾಜಿಕ ಮಾಧ್ಯಮಗಳಲ್ಲಿ ವಿವಾದಾತ್ಮಕ ಪೋಸ್ಟ್ ಕುರಿತು ಹಿರಿಯ ಐಪಿಎಸ್ ಅಧಿಕಾರಿ ಡಿ.ರೂಪಾ ಕ್ಷಮೆ ಕೇಳಬೇಕು ಎಂದು ಹಿರಿಯ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಸುಪ್ರೀಂ ಕೋರ್ಟ್ ನಲ್ಲಿ ಬಿಗಿಪಟ್ಟು ಹಿಡಿದಿದ್ದಾರೆ.

ನವದೆಹಲಿ: ಸಾಮಾಜಿಕ ಮಾಧ್ಯಮಗಳಲ್ಲಿ ವಿವಾದಾತ್ಮಕ ಪೋಸ್ಟ್ ಕುರಿತು ಹಿರಿಯ ಐಪಿಎಸ್ ಅಧಿಕಾರಿ ಡಿ.ರೂಪಾ ಕ್ಷಮೆ ಕೇಳಬೇಕು ಎಂದು ಹಿರಿಯ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಸುಪ್ರೀಂ ಕೋರ್ಟ್ ನಲ್ಲಿ ಬಿಗಿಪಟ್ಟು ಹಿಡಿದಿದ್ದಾರೆ.
ಡಿ.ರೂಪಾ ವಿರುದ್ಧ ಸಲ್ಲಿಸಿದ್ದ ಮಾನನಷ್ಟ ಪ್ರಕರಣದ ವಿಚಾರಣೆ ಸಂದರ್ಭದಲ್ಲಿ ವಾದ ಮಂಡಿಸಿದ ರೋಹಿಣಿ ಸಿಂಧೂರಿ ಪರ ವಕೀಲರು, ಮಾನಹಾನಿಯಾಗುವ ರೀತಿಯಲ್ಲಿ ಪೋಸ್ಟ್ ಗಳನ್ನು ಮಾಡಲಾಗಿದೆ ಈ ಹಿನ್ನಲೆಯಲ್ಲಿ ಡಿ.ರೂಪಾ ಬೇಷರತ್ ಕ್ಷಮೆ ಕೋರುವಂತೆ ಒತ್ತಾಯಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಡಿ.ರೂಪಾ ಪರ ವಕೀಲರು, ರೋಹಿಣಿ ಸಿಂಧೂರಿ ಕೂಡಾ ಆರೋಪ ಮಾಡಿದ್ದಾರೆ. ಬುದ್ಧಿ ಭ್ರಮಣೆಯಾಗಿದೆ ಎಂದು ಮಾಧ್ಯಮಗಳಲ್ಲಿ ಹೇಳಿಕೆ ನೀಡಿದ್ದಾರೆ ಎಂದು ವಾದಿಸಿದರು. ಇದಕ್ಕೆ ಪ್ರತಿವಾದ ಮಂಡಿಸಿದ ಸಿಂಧೂರಿ ಪರ ವಕೀಲರು, ಹೌದು ಬುದ್ಧಿ ಭ್ರಮಣೆಯಾದವರು ಈ ರೀತಿ ಪೊಸ್ಟ್ ಮಾಡುತ್ತಾರೆ. ಆದರೆ ಅವರಿಗೆ ಬುದ್ಧಿಭ್ರಮಣೆಯಾಗಿದೆ ಎಂದು ಹೇಳಿಲ್ಲ.
ಅವಹೇಳನಕಾರಿ ಪೋಸ್ಟ್ ಗಳನ್ನು ಸಾಮಾಜಿಕ ಮಾಧ್ಯಮಗಳಿಂದ ಡಿಲೀಟ್ ಮಾಡಬಹುದು. ಆದರೆ ಇಂತಹ ಪೋಸ್ಟ್ ಗಳಿಂದ ನನ್ನ ಕುಟುಂಬಕ್ಕೆ ಘಾಸಿಯಾಗಿದೆ, ನಾನು ಸಾರ್ವಜನಿಕ ಜೀವನದಲ್ಲಿ ಕೆಲಸ ಮಾಡುವುದು ಹೇಗೆ? ಹೀಗಾಗಿ ಐಪಿಎಸ್ ಡಿ.ರೂಪಾ ಬೇಷರತ್ ಕ್ಷಮೆ ಕೇಳಬೇಕು ಎಂದು ರೋಹಿಣಿ ಸಿಂಧೂರಿ ಪಟ್ಟು ಹಿಡಿದಿದ್ದಾರೆ.
ವಾದ-ಪ್ರತಿವಾದ ಆಲಿಸಿದ ನ್ಯಾಯಮೂರ್ತಿಎ.ಎಸ್ ಓಕಾ, ಒಂದು ತಿಂಗಳ ಸಮಯ ನೀಡಲಾಗುವುದು, ಫೆ.16ಕ್ಕೆ ಮುಂದಿನ ವಿಚಾರಣೆಗೆ ಪಟ್ಟಿ ಮಾಡಲಾಗುವುದು. ಅಲ್ಲಿಯ ತನಕ ಮಧ್ಯಂತರ ಆದೇಶ ಮುಂದುವರಿಯಲಿದೆ. ಯಾರು ಯಾರ ವಿರುದ್ಧವೂ ಆರೋಪ ಪ್ರತ್ಯಾರೋಪ ಮಾಡಬಾರದು. ಸೋಶಿಯಲ್ ಮೀಡಿಯಾದಲ್ಲಿಯೂ ಪೋಸ್ಟ್ ಮಾಡುವಂತಿಲ್ಲ ಎಂದು ನ್ಯಾಯಾಧೀಶರು ಸೂಚಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


