ರಾಮಮಂದಿರದಲ್ಲಿ ಪ್ರಾಣಪ್ರತಿಷ್ಠಾಪನೆ: ಇಂದಿನಿಂದ 11 ದಿನಗಳ ಕಾಲ ಪ್ರಧಾನಿ ಮೋದಿ ಉಪವಾಸ
ಜ.22 ರಂದು ಅಯೋಧ್ಯೆಯ ರಾಮ ಮಂದಿರ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದ್ದು, ಇಂದಿನಿಂದ (ಜ.12 ರಿಂದ) ಪ್ರಧಾನಿ ಮೋದಿ ಉಪವಾಸ ವ್ರತ ಕೈಗೊಂಡಿದ್ದಾರೆ.

ನಾಸಿಕ್: ಜ.22 ರಂದು ಅಯೋಧ್ಯೆಯ ರಾಮ ಮಂದಿರ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿದ್ದು, ಇಂದಿನಿಂದ (ಜ.12 ರಿಂದ) ಪ್ರಧಾನಿ ಮೋದಿ ಉಪವಾಸ ವ್ರತ ಕೈಗೊಂಡಿದ್ದಾರೆ.
ಮಹಾರಾಷ್ಟ್ರದ ನಾಸಿಕ್ ನಲ್ಲಿ ಪ್ರಸಿದ್ಧ ಕ್ಷೇತ್ರ ಶ್ರೀ ಕಲಾರಾಮ್ ದೇವಾಲಯದಲ್ಲಿ ದರ್ಶನ ಪಡೆದ ಪ್ರಧಾನಿ ಮೋದಿ ದೇವಾಲಯದಲ್ಲಿ ವಿಶೇಷ ಪೂಜೆ ಮಾಡುವ ಮೂಲಕ ಉಪವಾಸ ವ್ರತಕ್ಕೆ ಚಾಲನೆ ನೀಡಿದರು.
ಉಪವಾಸಕ್ಕೂ ಮುನ್ನ ನಾಸಿಕ್ ಗೆ ಭೇಟಿ ನೀಡಿದ್ದೇಕೆ?
ಭಗವಾನ್ ರಾಮ ಲಕ್ಷ್ಮಣ, ಸೀತೆ 14 ವರ್ಷಗಳ ವನವಾಸ ಆರಂಭಿಸಿದಾಗ ಹೆಚ್ಚಿನ ಸಮಯವನ್ನು ದಂಡಾಕರಣ್ಯದಲ್ಲಿ ಕಳೆದಿದ್ದರು. ಪ್ರಮುಖವಾಗಿ, ಪಂಚವಟಿಯಲ್ಲಿ ಪರ್ಣ ಕುಟೀರದಲ್ಲಿ ಜೀವನ ಸಾಗಿಸುತ್ತಿದ್ದರು.ರಾಮ, ಸೀತೆ ಮತ್ತು ಲಕ್ಷ್ಮಣ ತಮ್ಮ ವನವಾಸದ ಬಹು ಸಮಯವನ್ನು ಈ ಜಾಗದಲ್ಲಿ ಕಳೆದಿದ್ದರಿಂದ ಈ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವವಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ರಾಮ ಮಂದಿರದ ಉದ್ಘಾಟನೆಗೆ ಇನ್ನು 11 ದಿನಗಳಷ್ಟೇ ಬಾಕಿ ಇದೆ. ಈ ಪ್ರಮುಖ ಕಾರ್ಯಕ್ರಮದಲ್ಲಿ ನಾನೂ ಭಾಗಿಯಾಗುತ್ತಿರುವುದು ನನ್ನ ಅದೃಷ್ಟ. ಮಂದಿರದಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆಯ ವೇಳೆ ಭಾರತದ ಜನತೆಯನ್ನು ಪ್ರತಿನಿಧಿಸುವುದಕ್ಕೆ ಭಗವಾನ್ ರಾಮ ನನ್ನನ್ನು ನಿಮಿತ್ತವಾಗಿಸಿದ್ದಾನೆ.
“ಇದನ್ನು ಗಮನದಲ್ಲಿಟ್ಟುಕೊಂಡು ನಾನು ಇಂದಿನಿಂದ 11 ದಿನಗಳ ವಿಶೇಷ ಉಪವಾಸ ವ್ರತವನ್ನು ಪ್ರಾರಂಭಿಸುತ್ತಿದ್ದೇನೆ. ನಾನು ಎಲ್ಲ ಜನರ ಆಶೀರ್ವಾದವನ್ನು ಕೇಳುತ್ತಿದ್ದೇನೆ. ಈ ಕ್ಷಣದಲ್ಲಿ, ನನ್ನ ಭಾವನೆಗಳನ್ನು ಪದಗಳಲ್ಲಿ ವ್ಯಕ್ತಪಡಿಸುವುದು ತುಂಬಾ ಕಷ್ಟ, ಆದರೆ ನಾನು ನನ್ನ ಕಡೆಯಿಂದ ಪ್ರಯತ್ನಿಸಿದ್ದೇನೆ ”ಎಂದು ಅವರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


