ಜ.22ಕ್ಕೆ ಅಯೋಧ್ಯೆ ರಾಮಮಂದಿರ ಉದ್ಘಾಟನೆ: '11 ದಿನಗಳ ವಿಶೇಷ ಆಚರಣೆ' ಆರಂಭಿಸಿದ ಪ್ರಧಾನಿ ಮೋದಿ; ಆಡಿಯೊ ಸಂದೇಶ
ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ಮೂರ್ತಿ ಉದ್ಘಾಟನೆ ಕಾರ್ಯಕ್ರಮಕ್ಕೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಇಂದು ಶುಕ್ರವಾರ ದೇಶದ ಜನತೆಗೆ ಆಡಿಯೋ ಸಂದೇಶವನ್ನು ಬಿಡುಗಡೆ ಮಾಡಿದ್ದಾರೆ.

ನವದೆಹಲಿ: ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮ ಮಂದಿರ ಮೂರ್ತಿ ಉದ್ಘಾಟನೆ ಕಾರ್ಯಕ್ರಮಕ್ಕೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಇಂದು ಶುಕ್ರವಾರ ದೇಶದ ಜನತೆಗೆ ಆಡಿಯೋ ಸಂದೇಶವನ್ನು ಬಿಡುಗಡೆ ಮಾಡಿದ್ದಾರೆ.
"ಅಯೋಧ್ಯೆಯಲ್ಲಿ ರಾಮ ಲಲ್ಲಾನ ಪ್ರಾಣ ಪ್ರತಿಷ್ಠಾಪನೆಗೆ ಇನ್ನು ಕೇವಲ 11 ದಿನಗಳು ಉಳಿದಿವೆ. ನಾನು ಕೂಡ ಈ ಪವಿತ್ರ ಸಂದರ್ಭಕ್ಕೆ ಸಾಕ್ಷಿಯಾಗುವುದು ನನ್ನ ಪಾಲಿಗೆ ಅದೃಷ್ಟ. ಈ ಸಮಯದಲ್ಲಿ ಭಾರತದ ನಾಗರಿಕರನ್ನು ಪ್ರತಿನಿಧಿಸಲು ದೇವರು ನನ್ನನ್ನು ಸೃಷ್ಟಿಸಿದನು. ಇದನ್ನು ಗಮನದಲ್ಲಿಟ್ಟುಕೊಂಡು ಇಂದಿನಿಂದ 11 ದಿನಗಳು ವಿಶೇಷ ಸಂಪ್ರದಾಯವನ್ನು ನಾನು ಆಚರಿಸುತ್ತಿದ್ದೇನೆ'' ಎಂದು ಟ್ವೀಟ್ ಮಾಡಿದ್ದಾರೆ.
ತಮ್ಮ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಆಡಿಯೊ ಸಂದೇಶ ಪೋಸ್ಟ್ ಮಾಡಿದ್ದು, ಪ್ರಾಣ ಪ್ರತಿಷ್ಠಪನೆ ಐತಿಹಾಸಿಕ ಮತ್ತು ಶುಭಕರ ಸಂದರ್ಭವಾಗಿದ್ದು, ಅದಕ್ಕೆ ಸಾಕ್ಷಿಯಾಗುತ್ತಿರುವ ನಾನು ಅದೃಷ್ಟಶಾಲಿ ಎಂದಿದ್ದಾರೆ.
ನಾನು ಭಾವುಕನಾಗಿದ್ದೇನೆ. ನನ್ನ ಜೀವನದಲ್ಲಿ ಮೊದಲ ಬಾರಿಗೆ ನಾನು ಇಂತಹ ಭಾವನೆಗಳನ್ನು ಅನುಭವಿಸುತ್ತಿದ್ದೇನೆ ಎಂದಿದ್ದಾರೆ. ಪ್ರಾಣ ಪ್ರತಿಷ್ಠಾಪನೆ ಸಮಾರಂಭಕ್ಕೆ ಸಂಬಂಧಿಸಿದ ಗ್ರಂಥಗಳಲ್ಲಿ ವಿವರಿಸಿರುವ ಕಠಿಣ ಮಾರ್ಗಸೂಚಿಗಳನ್ನು ಪ್ರಧಾನಿ ಮೋದಿ ಅನುಸರಿಸಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


