ದೇಶ

ಹರಿಯಾಣ: ಮಾಜಿ ಮಾಡೆಲ್ ದಿವ್ಯಾ ಪಹುಜಾ ಮೃತದೇಹ ಕಾಲುವೆಯಲ್ಲಿ ಪತ್ತೆ

ಗುರುಗ್ರಾಮ್‌ನ ಹೋಟೆಲ್‌ವೊಂದರಲ್ಲಿ ಹತ್ಯೆಗೀಡಾದ ಮಾಜಿ ಮಾಡೆಲ್ ದಿವ್ಯಾ ಪಹುಜಾ ಅವರ ಮೃತದೇಹ ಹರಿಯಾಣದ ಫತೇಹಾಬಾದ್ ಜಿಲ್ಲೆಯ ಕಾಲುವೆಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಹರಿಯಾಣ: ಮಾಜಿ ಮಾಡೆಲ್ ದಿವ್ಯಾ ಪಹುಜಾ ಮೃತದೇಹ ಕಾಲುವೆಯಲ್ಲಿ ಪತ್ತೆ
ಕೊಲೆಯಾದ ದಿವ್ಯಾ ಪಹುಜಾ
Published On :

ಚಂಡೀಗಢ: ಗುರುಗ್ರಾಮ್‌ನ ಹೋಟೆಲ್‌ವೊಂದರಲ್ಲಿ ಹತ್ಯೆಗೀಡಾದ ಮಾಜಿ ಮಾಡೆಲ್ ದಿವ್ಯಾ ಪಹುಜಾ ಅವರ ಮೃತದೇಹ ಹರಿಯಾಣದ ಫತೇಹಾಬಾದ್ ಜಿಲ್ಲೆಯ ಕಾಲುವೆಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ತೋಹಾನಾದಲ್ಲಿರುವ ಭಾಕ್ರಾ ಕಾಲುವೆಯ ಉಪ ಕಾಲುವೆಯಿಂದ ಮೃತದೇಹವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಗುರುಗ್ರಾಮ್ ಸಹಾಯಕ ಪೊಲೀಸ್ ಆಯುಕ್ತ(ಅಪರಾಧ) ವರುಣ್ ಕುಮಾರ್ ದಹಿಯಾ ಅವರು ಹೇಳಿದ್ದಾರೆ.

ಜನವರಿ 2 ರಂದು ಗುರುಗ್ರಾಮ್‌ನ ಹೋಟೆಲ್ ಕೊಠಡಿಯಲ್ಲಿ 27 ವರ್ಷದ ದಿವ್ಯಾ ಪಹುಜಾ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.

ಪೋಲೀಸರ ಪ್ರಕಾರ, ಮಾಜಿ ಮಾಡೆಲ್ "ಅಶ್ಲೀಲ ಚಿತ್ರಗಳನ್ನು" ಇಟ್ಟುಕೊಂಡು  ಹೋಟೆಲ್ ಮಾಲೀಕರಿಗೆ ಬ್ಲ್ಯಾಕ್‌ಮೇಲ್ ಮಾಡುವ ಮೂಲಕ ಹಣ ವಸೂಲಿ ಮಾಡುತ್ತಿದ್ದಳು ಎಂಬ ಕಾರಣಕ್ಕಾಗಿ ಹತ್ಯೆ ಮಾಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.