ಖ್ಯಾತ ಹಿಂದೂಸ್ತಾನಿ ಗಾಯಕಿ ಡಾ. ಪ್ರಭಾ ಅತ್ರೆ ಹೃದಯಾಘಾತದಿಂದ ನಿಧನ
ಖ್ಯಾತ ಹಿಂದೂಸ್ತಾನಿ ಗಾಯಕಿ ಡಾ. ಪ್ರಭಾ ಅತ್ರೆ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಇಂದು ಬೆಳಗ್ಗೆ ಪುಣೆಯಲ್ಲಿರುವ ಅವರ ನಿವಾಸದಲ್ಲಿ ವಿಧಿವಶರಾಗಿದ್ದಾರೆ.

ಖ್ಯಾತ ಹಿಂದೂಸ್ತಾನಿ ಗಾಯಕಿ ಡಾ. ಪ್ರಭಾ ಅತ್ರೆ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಇಂದು ಬೆಳಗ್ಗೆ ಪುಣೆಯಲ್ಲಿರುವ ಅವರ ನಿವಾಸದಲ್ಲಿ ವಿಧಿವಶರಾಗಿದ್ದಾರೆ.
ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ಕಿರಾನಾ ಘರಾನಾವನ್ನು ಪ್ರತಿನಿಧಿಸಿದ ಅತ್ರೆ ಅವರು ಭಾರತ ಸರ್ಕಾರದಿಂದ ಎಲ್ಲಾ ಮೂರು ಪದ್ಮ ಪ್ರಶಸ್ತಿಗಳನ್ನು ಪಡೆದುಕೊಂಡಿದ್ದಾರೆ. ನಿದ್ರಿಸುವಾಗಲೇ ಹೃದಯಾಘಾತವಾಗಿದೆ. ಅವರನ್ನು ನಗರದ ಕೊತ್ರುಡ್ ಪ್ರದೇಶದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಅವರು ಬೆಳಿಗ್ಗೆ 5.30 ಕ್ಕೆ ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಯಿತು.
ಇದನ್ನೂ ಓದಿ: ಸಂಗೀತ ಮಾಂತ್ರಿಕ ಉಸ್ತಾದ್ ರಶೀದ್ ಖಾನ್ ನಿಧನ
ಅತ್ರೆ, 1932ರ ಸೆಪ್ಟೆಂಬರ್ 13ರಂದು ಜನಿಸಿದರು. ಕಾನೂನು ಪದವೀಧರರಾಗಿದ್ದ ಅವರು ಸಂಗೀತದಲ್ಲಿ ಡಾಕ್ಟರೇಟ್ ಪಡೆದಿದ್ದರು. ಬಹುಮುಖಿ ವ್ಯಕ್ತಿತ್ವದ ಅತ್ರೆ ಶಾಸ್ತ್ರೀಯ ಗಾಯಕಿ ಮಾತ್ರವಲ್ಲದೇ, ಶಿಕ್ಷಣತಜ್ಞೆಯಾಗಿ, ಸಂಶೋಧಕಿಯಾಗಿ, ಲೇಖಕಿಯಾಗಿ ಗುರುತಿಸಿಕೊಂಡಿದ್ದರು. 1990ರಲ್ಲಿ ಪದ್ಮಶ್ರೀ, 2002ರಲ್ಲಿ ಪದ್ಮಭೂಷಣ ಹಾಗೂ 2022ರಲ್ಲಿ ಪದ್ಮ ವಿಭೂಷಣ ಪ್ರಶಸ್ತಿ ನೀಡಿ ಅವರನ್ನು ಗೌರವಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


