ನಾಯಿಗಳ ಹಾವಳಿ ಹೆಚ್ಚಳ: ಏಳು ತಿಂಗಳ ಮಗುವನ್ನು ಕಚ್ಚಿ ಕೊಂದ ಬೀದಿ ನಾಯಿಗಳು!
ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿ ಏಳು ತಿಂಗಳ ಬಾಲಕನನ್ನು ಬೀದಿ ನಾಯಿಗಳ ಹಿಂಡು ಕಚ್ಚಿ ಕೊಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಭೋಪಾಲ್: ಮಧ್ಯಪ್ರದೇಶದ ರಾಜಧಾನಿ ಭೋಪಾಲ್‌ನಲ್ಲಿ ಏಳು ತಿಂಗಳ ಬಾಲಕನನ್ನು ಬೀದಿ ನಾಯಿಗಳ ಹಿಂಡು ಕಚ್ಚಿ ಕೊಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಯೋಧ್ಯಾ ನಗರ ಪ್ರದೇಶದಲ್ಲಿ ನಡೆದ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಘಟನೆ ಬೆಳಕಿಗೆ ಬಂದಿದ್ದು ಈ ಸಂಬಂಧ ಪೊಲೀಸರು ಮತ್ತು ಆಡಳಿತದ ಗಮನಕ್ಕೆ ತರಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನಾಯಿಗಳ ದಾಳಿಯಿಂದ ಮಗು ಮೃತಪಟ್ಟ ದಿನವೇ ಮನೆಯವರು ಹೂತಿಟ್ಟಿದ್ದ ಮಗುವಿನ ಶವವನ್ನು ಪೊಲೀಸರು ವಶಪಡಿಸಿಕೊಂಡಿದ್ದು, ಶನಿವಾರ ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ ಎಂದು ಅವರು ಹೇಳಿದರು.
ಮಗುವಿನ ಪೋಷಕರು ದಿನಗೂಲಿ ಕೆಲಸ ಮಾಡುತ್ತಿದ್ದರು. ಅಯೋಧ್ಯಾ ನಗರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಮಹೇಶ್ ನಿಲ್ಹಾರೆ ಅವರು ಘಟನೆಗೆ ಮುನ್ನ ಮಗುವಿನ ತಾಯಿ ತನಗೆ ಹತ್ತಿರದಲ್ಲಿ ಸ್ವಲ್ಪ ಕೆಲಸವಿದೆ ಎಂದು ಮಗುವನ್ನು ನೆಲದ ಮೇಲೆ ಮಲಗಿಸಿದ್ದರು. ಹೀಗಾಗಿ ನಾಯಿಗಳ ದಂಡು ಮಗುವನ್ನು ಕಚ್ಚಿ ಎಳೆದೊಯ್ದಿದೆ ಎಂದು ಅವರು ಹೇಳಿದರು.
ಇದನ್ನೂ ಓದಿ: ಬೀದಿ ನಾಯಿ ದಾಳಿಯಿಂದ ಗಾಯಗೊಂಡವರಿಗೆ 5 ಲಕ್ಷ ರೂ. ಪರಿಹಾರ ನೀಡಲು ಚಿಂತನೆ: ಹೈಕೋರ್ಟ್ಗೆ ಸರ್ಕಾರ ಮಾಹಿತಿ
ಅಕ್ಕಪಕ್ಕದ ಜನರು ಈ ಭೀಕರ ಘಟನೆಯನ್ನು ನೋಡಿ ಕೂಗಾಡಿದ್ದಾರೆ. ಆದರೆ ಅಷ್ಟರಲ್ಲಿ ನಾಯಿಗಳು ಮಗುವಿನ ಒಂದು ಕೈಯನ್ನು ಕಚ್ಚಿದ್ದವು. ಅಲ್ಲದೆ ಮಗುವಿನ ದೇಹವನ್ನು ಕಚ್ಚಿ ಎಳೆದಾಡಿದ್ದರಿಂದ ಮಗು ಸ್ಥಳದಲ್ಲೇ ಸಾವನ್ನಪ್ಪಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಗುಣಾ ಜಿಲ್ಲೆಯವರಾದ ಮಗುವಿನ ಪೋಷಕರು ಭೋಪಾಲ್ ಬಳಿಯ ಹಳ್ಳಿಯೊಂದರಲ್ಲಿ ಶವವನ್ನು ಸಮಾಧಿ ಮಾಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಿಸಲಿದ್ದಾರೆ.
ಏತನ್ಮಧ್ಯೆ, ಜಿಲ್ಲಾಡಳಿತವು ಬಾಲಕನ ಕುಟುಂಬಕ್ಕೆ 50,000 ರೂಪಾಯಿ ಆರ್ಥಿಕ ಸಹಾಯವನ್ನು ನೀಡಿದ್ದು, ಇನ್ನೂ 50,000 ರೂಪಾಯಿಗಳನ್ನು ಶೀಘ್ರದಲ್ಲೇ ವಿತರಿಸಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಭೋಪಾಲ್ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಅಯೋಧ್ಯಾ ನಗರ ಪ್ರದೇಶದಿಂದ ಎಂಟು ಬೀದಿ ನಾಯಿಗಳನ್ನು ಹಿಡಿದಿದೆ. ಅಲ್ಲದೆ ಬೀದಿ ನಾಯಿಗಳನ್ನು ಹಿಡಿಯುವ ಅಭಿಯಾನವನ್ನು ಪ್ರಾರಂಭಿಸಲು ಜಿಲ್ಲಾಧಿಕಾರಿಗಳು ನಾಗರಿಕ ಸಂಸ್ಥೆಯನ್ನು ಕೋರಿದ್ದಾರೆ ಎಂದು ಅವರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


