ಕೋವಿಡ್-19: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 375 ಹೊಸ ಪ್ರಕರಣ, ಕರ್ನಾಟಕದಲ್ಲಿ ಇಬ್ಬರು ಸಾವು
ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ 375 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 3,075ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.

ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ 375 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 3,075ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.
ಇದೇ ಅವಧಿಯಲ್ಲಿ ಕರ್ನಾಟಕದಲ್ಲಿ ಇಬ್ಬರು ಸಾವಿಗೀಡಾಗಿದ್ದಾರೆ ಎಂದು ಮುಂಜಾನೆ 8 ಗಂಟೆಗೆ ಲಭ್ಯವಾದ ಸಚಿವಾಲಯದ ನವೀಕೃತ ಮಾಹಿತಿ ತಿಳಿಸಿದೆ.
2020ರ ಆರಂಭದಲ್ಲಿ ಕೋವಿಡ್ ಸಾಂಕ್ರಾಮಿಕ ರೋಗವು ಪ್ರಾರಂಭವಾದಾಗಿನಿಂದ, ದೇಶದಾದ್ಯಂತ ಕಳೆದ ನಾಲ್ಕು ವರ್ಷಗಳಲ್ಲಿ ಸುಮಾರು 4.5 ಕೋಟಿಗೂ ಹೆಚ್ಚು ಜನರು ಸೋಂಕಿಗೆ ಒಳಗಾಗಿದ್ದಾರೆ ಮತ್ತು 5.3 ಲಕ್ಷಕ್ಕೂ ಹೆಚ್ಚು ಸಾವುಗಳು ಸಂಭವಿಸಿವೆ.
ಸಚಿವಾಲಯದ ವೆಬ್ಸೈಟಿನಲ್ಲಿ ನೀಡಿರುವ ಮಾಹಿತಿ ಪ್ರಕಾರ, ದೇಶದಲ್ಲಿ ಈವರೆಗೆ 220.67 ಕೋಟಿ ಕೋವಿಡ್ ವಿರುದ್ಧದ ಲಸಿಕಾ ಡೋಸ್ಗಳನ್ನು ವಿತರಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


