ಕಾಂಗ್ರೆಸ್ ಜೊತೆಗಿನ 55 ವರ್ಷಗಳ ಸಂಬಂಧ ಮುರಿದುಕೊಂಡ ಮಿಲಿಂದ್ ಡಿಯೋರಾ; ಪಕ್ಷ ತೊರೆದ ಬಳಿಕ ಹೇಳಿದ್ದೇನು?
ಹಿರಿಯ ಕಾಂಗ್ರೆಸ್ ನಾಯಕ ಮಿಲಿಂದ್ ದಿಯೋರಾ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವುದಾಗಿ ಭಾನುವಾರ ಘೋಷಿಸಿದ್ದಾರೆ. ಇಂದು ಮಧ್ಯಾಹ್ನ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಗೆ ಸೇರುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಮುಂಬೈ: ಹಿರಿಯ ಕಾಂಗ್ರೆಸ್ ನಾಯಕ ಮಿಲಿಂದ್ ದಿಯೋರಾ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವುದಾಗಿ ಭಾನುವಾರ ಘೋಷಿಸಿದ್ದಾರೆ.
ಇಂದು ಮಧ್ಯಾಹ್ನ ಅವರು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಗೆ ಸೇರುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್ ಹಿರಿಯ ನಾಯಕ ಮುರಳಿ ದಿಯೋರಾ ಅವರ ಪುತ್ರ ಮಿಲಿಂದ್, ತಮ್ಮ ರಾಜೀನಾಮೆಯನ್ನು ದೃಢಪಡಿಸಿದ್ದಾರೆ ಮತ್ತು 'ಇಂದು ನನ್ನ ರಾಜಕೀಯ ಪಯಣದಲ್ಲಿ ಮಹತ್ವದ ಅಧ್ಯಾಯವೊಂದರ ಮುಕ್ತಾಯವನ್ನು ಸೂಚಿಸುತ್ತದೆ. ನಾನು ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆಯನ್ನು ಸಲ್ಲಿಸಿದ್ದೇನೆ. ಈ ಮೂಲಕ ಪಕ್ಷದೊಂದಿಗಿನ ನಮ್ಮ ಕುಟುಂಬದ 55 ವರ್ಷಗಳ ಸಂಬಂಧ ಕೊನೆಗೊಂಡಿದೆ' ಎಂದಿದ್ದಾರೆ.
'ಇಷ್ಟು ವರ್ಷ ನನಗೆ ಬೆಂಬಲ ನೀಡಿದ ಎಲ್ಲಾ ನಾಯಕರು, ಸಹೋದ್ಯೋಗಿಗಳು ಮತ್ತು ಕಾರ್ಯಕರ್ತರಿಗೆ ನಾನು ಕೃತಜ್ಞನಾಗಿದ್ದೇನೆ' ಎಂದು ಅವರು ಹೇಳಿದರು.
ಮಿಲಿಂದ್ ದಿಯೋರಾ ಅವರು 2012 ರಿಂದ 2014 ರವರೆಗೆ ಕಾಂಗ್ರೆಸ್ ಅಧಿಕಾರಾವಧಿಯಲ್ಲಿ ಕೇಂದ್ರದ ಸಂವಹನ ಮತ್ತು ಮಾಹಿತಿ ತಂತ್ರಜ್ಞಾನ ಮತ್ತು ಶಿಪ್ಪಿಂಗ್ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.
ಅವರು ಮುಂಬೈ ಪ್ರದೇಶ ಕಾಂಗ್ರೆಸ್ ಸಮಿತಿಯ ಮಾಜಿ ಅಧ್ಯಕ್ಷರೂ ಆಗಿದ್ದಾರೆ. ದಿಯೋರಾ ಅವರು ಈ ಹಿಂದೆ ಪ್ರತಿನಿಧಿಸಿದ್ದ ಮುಂಬೈ ದಕ್ಷಿಣ ಲೋಕಸಭಾ ಕ್ಷೇತ್ರವನ್ನು ಶಿವಸೇನೆ (ಯುಬಿಟಿ) ಹಕ್ಕು ಸಾಧಿಸಿರುವ ಬಗ್ಗೆಯೂ ಅವರು ಅಸಮಾಧಾನ ವ್ಯಕ್ತಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


