ಕೋವಿಡ್-19: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 272 ಹೊಸ ಪ್ರಕರಣ, ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಕೆ
ಇಂದು ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ 272 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 2,990ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.

ನವದೆಹಲಿ: ಇಂದು ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ 272 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 2,990ಕ್ಕೆ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಸೋಮವಾರ ತಿಳಿಸಿದೆ.
ಮುಂಜಾನೆ 8 ಗಂಟೆಗೆ ಲಭ್ಯವಾದ ನವೀಕೃತ ಮಾಹಿತಿ ಪ್ರಕಾರ, ಇದೇ ಅವಧಿಯಲ್ಲಿ ದೇಶದಲ್ಲಿ ಸಾವಿನ ಪ್ರಕರಣಗಳು ವರದಿಯಾಗಿಲ್ಲ.
2020ರ ಕೊನೆಯಲ್ಲಿ ಪತ್ತೆಯಾದ ಕೋವಿಡ್ ಸಾಂಕ್ರಾಮಿಕ ದೇಶದಲ್ಲಿ ಮೂರು ಅಲೆಗಳನ್ನು ಸೃಷ್ಟಿಸಿದೆ. ಕಳೆದ ನಾಲ್ಕು ವರ್ಷಳಳಿಂದ ಇಲ್ಲಿಯವರೆಗೆ ಒಟ್ಟು 4.5 ಕೋಟಿ ಮಂದಿಗೆ ಸೋಂಕು ತಗುಲಿದೆ. ಈಪೈಕಿ 4.4 ಕೋಟಿ ಮಂದಿ ಈವರೆಗೆ ಕೋವಿಡ್‌ನಿಂದ ಚೇತರಿಸಿಕೊಂಡಿದ್ದಾರೆ. ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.81ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.
ಸಚಿವಾಲಯದ ವೆಬ್‌ಸೈಟಿನಲ್ಲಿ ನೀಡಿರುವ ಮಾಹಿತಿ ಪ್ರಕಾರ, ದೇಶದಲ್ಲಿ ಇದುವರೆಗೆ 220.67 ಕೋಟಿಗೂ ಅಧಿಕ ಕೋವಿಡ್ ವಿರುದ್ಧದ ಲಸಿಕಾ ಡೋಸ್‌ಗಳನ್ನು ವಿತರಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


