ಮಣಿಪುರದ ಹಿಂಸಾಚಾರದಲ್ಲಿ ನಾಲ್ವರು ಗುಂಡೇಟಿಗೆ ಬಲಿ!
ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದಿದ್ದು, ಗುರುವಾರ ಸಂಜೆ ನಾಲ್ವರು ಗುಂಡೇಟಿಗೆ ಬಲಿಯಾಗಿದ್ದಾರೆ.

ಮಣಿಪುರ: ಮಣಿಪುರದಲ್ಲಿ ಹಿಂಸಾಚಾರ ಮುಂದುವರೆದಿದ್ದು, ಗುರುವಾರ ಸಂಜೆ ನಾಲ್ವರು ಗುಂಡೇಟಿಗೆ ಬಲಿಯಾಗಿದ್ದಾರೆ.
ಬಿಷ್ಣುಪುರ ಜಿಲ್ಲೆಯ ನಿಂಗ್‌ತೌಖೋಂಗ್ ಖಾ ಖುನೌದಲ್ಲಿ ಈ ಘಟನೆ ಸಂಭವಿಸಿದೆ ಮತ್ತು ಬಲಿಪಶುಗಳಲ್ಲಿ ಒಬ್ಬ ವ್ಯಕ್ತಿ ಮತ್ತು ಆತನ 60 ವರ್ಷದ ತಂದೆ ಸೇರಿದ್ದಾರೆ.
ಪ್ರಕರಣದ ತನಿಖೆ ನಡೆಸುತ್ತಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಗುಂಡಿನ ದಾಳಿಯಿಂದ ತಪ್ಪಿಸಿಕೊಂಡ ಒಬ್ಬ ವ್ಯಕ್ತಿಯನ್ನು ಉಲ್ಲೇಖಿಸಿ, ಅಧಿಕಾರಿಯೊಬ್ಬರು, "ಕಾರ್ಮಿಕರು ಕೃಷಿ ಭೂಮಿಯಲ್ಲಿ ಉಳುತ್ತಿದ್ದಾಗ ಐದಾರು ಶಸ್ತ್ರಸಜ್ಜಿತ ದುಷ್ಕರ್ಮಿಗಳು ಬಂದು ಪಾಯಿಂಟ್-ಬ್ಲಾಂಕ್ ರೇಂಜ್ನಿಂದ ಗುಂಡು ಹಾರಿಸಿದರು" ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ದಾಳಿ ನಡೆಸಿದ, ದುಷ್ಕರ್ಮಿಗಳು ಅವರು ಬಂದ ಸ್ಥಳದಿಂದ ಬೆಟ್ಟದ ಶ್ರೇಣಿಗಳಿಗೆ ಓಡಿಹೋದರು ಇಂದು ಮೃತಪಟ್ಟ ನಾಲ್ವರೊಂದಿಗೆ, ಬುಧವಾರದಿಂದ ರಾಜ್ಯದ ಪ್ರತ್ಯೇಕ ಜಿಲ್ಲೆಗಳಲ್ಲಿ ಇಬ್ಬರು ಪೊಲೀಸ್ ಕಮಾಂಡೋಗಳು ಸೇರಿದಂತೆ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


