ದೇಶ

ಒಡಿಶಾ: ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ; ಖಾಸಗಿ ಶಾಲೆ ಹೆಡ್ ಮಾಸ್ಟರ್ ಬಂಧನ

ಒಡಿಶಾದ ಕೇಂದ್ರಪಾರಾ ಜಿಲ್ಲೆಯಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಖಾಸಗಿ ಶಾಲೆಯೊಂದರ 45 ವರ್ಷದ ಮುಖ್ಯೋಪಾಧ್ಯಾಯರನ್ನು ಶುಕ್ರವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಒಡಿಶಾ: ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ; ಖಾಸಗಿ ಶಾಲೆ ಹೆಡ್ ಮಾಸ್ಟರ್ ಬಂಧನ
ಸಾಂದರ್ಭಿಕ ಚಿತ್ರ
Published On :

ಕೇಂದ್ರಪಾರಾ: ಒಡಿಶಾದ ಕೇಂದ್ರಪಾರಾ ಜಿಲ್ಲೆಯಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಖಾಸಗಿ ಶಾಲೆಯೊಂದರ 45 ವರ್ಷದ ಮುಖ್ಯೋಪಾಧ್ಯಾಯರನ್ನು ಶುಕ್ರವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಹೆಡ್ ಮಾಸ್ಟರ್, ಜನವರಿ 16 ರಂದು ಶಾಲೆಯಲ್ಲಿ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ.

13 ವರ್ಷದ 7ನೇ ತರಗತಿಯ ಬಾಲಕಿಯರಿಬ್ಬರ ಮೇಲೆ ಹೆಡ್ ಮಾಸ್ಟರ್ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಾಲಕಿಯರು ಶಾಲೆಗೆ ಹೋಗಲು ನಿರಾಕರಿಸಿದ್ದು, ಏಕೆ ಶಾಲೆಗೆ ಹೋಗುತ್ತಿಲ್ಲ ಎಂದು ಅವರ ಪೋಷಕರು ಕೇಳಿದಾಗ ಈ ಆಘಾತಕಾರಿ ವಿಚಾರ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿಯ ಶಿಕ್ಷಕನ ವಿರುದ್ಧ ಐಪಿಸಿ ಸೆಕ್ಷನ್ 376, 354, 506 ಮತ್ತು ಪೋಕ್ಸೋ ಕಾಯಿದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ರಾಜನಗರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಅಜಯ ಕುಮಾರ್ ಜೆನಾ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.