ದೇಶ

ಜನವರಿ 22 ರಂದು ಏಮ್ಸ್ ಸೇರಿದಂತೆ ದೆಹಲಿಯಲ್ಲಿ ಕೇಂದ್ರ ಸರ್ಕಾರಿ ಆಸ್ಪತ್ರೆಗಳಿಗೆ ಅರ್ಧದಿನ ರಜೆ

ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆ ಸಮಾರಂಭದ ಪ್ರಯುಕ್ತ ದೆಹಲಿಯ ಏಮ್ಸ್ ಮತ್ತು ಸಫ್ದರ್‌ಜಂಗ್ ಆಸ್ಪತ್ರೆ ಸೇರಿದಂತೆ ಎಲ್ಲಾ ನಾಲ್ಕು ಕೇಂದ್ರ ಸರ್ಕಾರದ ಆಸ್ಪತ್ರೆಗಳಿಗೆ ಜನವರಿ 22 ರಂದು ಮಧ್ಯಾಹ್ನ 2.30 ರವರೆಗೆ ತುರ್ತು ಸೇವೆಗಳನ್ನು...

ಜನವರಿ 22 ರಂದು ಏಮ್ಸ್ ಸೇರಿದಂತೆ ದೆಹಲಿಯಲ್ಲಿ ಕೇಂದ್ರ ಸರ್ಕಾರಿ ಆಸ್ಪತ್ರೆಗಳಿಗೆ ಅರ್ಧದಿನ ರಜೆ
ಏಮ್ಸ್ (ಸಂಗ್ರಹ ಚಿತ್ರ)
Published On :

ನವದೆಹಲಿ: ರಾಮ ಮಂದಿರದಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆ ಸಮಾರಂಭದ ಪ್ರಯುಕ್ತ ದೆಹಲಿಯ ಏಮ್ಸ್ ಮತ್ತು ಸಫ್ದರ್‌ಜಂಗ್ ಆಸ್ಪತ್ರೆ ಸೇರಿದಂತೆ ಎಲ್ಲಾ ನಾಲ್ಕು ಕೇಂದ್ರ ಸರ್ಕಾರದ ಆಸ್ಪತ್ರೆಗಳಿಗೆ ಜನವರಿ 22 ರಂದು ಮಧ್ಯಾಹ್ನ 2.30 ರವರೆಗೆ ತುರ್ತು ಸೇವೆಗಳನ್ನು ಹೊರತುಪಡಿಸಿ ರಜೆ ನೀಡಲಾಗಿದೆ.
  
ದೆಹಲಿಯ ಏಮ್ಸ್‌ನ ಅಧಿಕೃತ ಸೂಚನೆಯ ಪ್ರಕಾರ, ಕೇಂದ್ರ ಸರ್ಕಾರ ಜನವರಿ 22 ರಂದು ಮಧ್ಯಾಹ್ನ 2.30 ರವರೆಗೆ ಅರ್ಧ ದಿನ ರಜೆ ಎಂದು ಘೋಷಿಸಿದೆ.

"ಜನವರಿ 22 ರಂದು ಮಧ್ಯಾಹ್ನ 2.30 ರವರೆಗೆ ಅರ್ಧ ದಿನ ರಜೆ ನೀಡಲಾಗಿದೆ ಎಂದು ಎಲ್ಲಾ ಉದ್ಯೋಗಿಗಳಿಗೆ ಸಂಸ್ಥೆ ಮಾಹಿತಿ ನೀಡಿದೆ. ಎಲ್ಲಾ ಕೇಂದ್ರಗಳ ಮುಖ್ಯಸ್ಥರು, ಇಲಾಖೆಗಳ ಮುಖ್ಯಸ್ಥರು, ಘಟಕಗಳು ಮತ್ತು ಶಾಖಾಧಿಕಾರಿಗಳು ಸೇರಿದಂತೆ ಎಲ್ಲಾ ಸಿಬ್ಬಂದಿಗಳ ಗಮನಕ್ಕೆ ತರಲು ವಿನಂತಿಸಲಾಗಿದೆ. 

"...ಎಲ್ಲಾ ನಿರ್ಣಾಯಕ ಮತ್ತು ತುರ್ತು ಸೇವೆಗಳನ್ನು ಹೊರತುಪಡಿಸಿ ರಜೆ ನೀಡಲಾಗಿದೆ" ಎಂದು ಅಧಿಸೂಚನೆ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.