ದೇಶ

ರಾಮ ಮಂದಿರ ಉದ್ಘಾಟನೆ: ಸ್ಪೀಡ್ ಪೋಸ್ಟ್ ಮೂಲಕ ಉದ್ಧವ್ ಠಾಕ್ರೆಗೆ ಆಹ್ವಾನ

ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಸಮಾರಂಭಕ್ಕೆ ಶಿವಸೇನೆ(ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಸ್ಪೀಡ್ ಪೋಸ್ಟ್ ಮೂಲಕ ಆಹ್ವಾನ ಸ್ವೀಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಮ ಮಂದಿರ ಉದ್ಘಾಟನೆ: ಸ್ಪೀಡ್ ಪೋಸ್ಟ್ ಮೂಲಕ ಉದ್ಧವ್ ಠಾಕ್ರೆಗೆ ಆಹ್ವಾನ
ಉದ್ಧವ್ ಠಾಕ್ರೆ
Published On :

ಮುಂಬೈ: ಅಯೋಧ್ಯೆಯ ರಾಮ ಮಂದಿರದಲ್ಲಿ ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಸಮಾರಂಭಕ್ಕೆ ಶಿವಸೇನೆ(ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಸ್ಪೀಡ್ ಪೋಸ್ಟ್ ಮೂಲಕ ಆಹ್ವಾನ ಸ್ವೀಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಉದ್ಧವ್ ಠಾಕ್ರೆ ಅವರಿಗೆ ಸ್ಪೀಡ್ ಪೋಸ್ಟ್ ಮೂಲಕ ಆಹ್ವಾನ ಬಂದಿದೆ ಎಂದು ಮೂಲಗಳು ತಿಳಿಸಿವೆ. ಸ್ಪೀಡ್ ಪೋಸ್ಟ್ ಮೂಲಕ ಆಹ್ವಾನ ಕಳುಹಿಸಿರುವುದಕ್ಕೆ ಶಿವಸೇನೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. 

ಆಹ್ವಾನ ನೀಡಿದ ವಿಧಾನದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಶಿವಸೇನೆ ಯುಬಿಟಿ ಸಂಸದ ಸಂಜಯ್ ರಾವತ್ ಅವರು, "ರಾಮ ಜನ್ಮಭೂಮಿ ಆಂದೋಲನದಲ್ಲಿ ಠಾಕ್ರೆ ಅವರು ಮಹತ್ವದ ಪಾತ್ರ ವಹಿಸಿದ್ದಾರೆ. ಇದನ್ನು ರಾಮ ಕ್ಷಮಿಸುವುದಿಲ್ಲ" ಎಂದು ಟೀಕಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.