''ಇತರರು ಏನೇ ಮಾಡಿದರೂ ಡೋಂಟ್ ಕೇರ್, ರಾಮ ಮಂದಿರ ಉದ್ಘಾಟನೆಗೆ ಹೋಗೆ ಹೋಗುತ್ತೇನೆ- ಹರ್ಭಜನ್ ಸಿಂಗ್
ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಲಲ್ಲಾ (ರಾಮನ ವಿಗ್ರಹ) 'ಪ್ರಾಣ ಪ್ರತಿಷ್ಠಾಪನೆ ಸಮಾರಂಭದಲ್ಲಿ ಗೈರಾಗಲು ಬಹುತೇಕ ವಿಪಕ್ಷಗಳು ನಿಲುವು ತಾಳಿದರೂ ತಾವು ಪಾಲ್ಗೊಳ್ಳುವುದಾಗಿ ಮಾಜಿ ಕ್ರಿಕೆಟಿಗ ಮತ್ತು ಎಎಪಿ ಸಂಸದ ಹರ್ಭಜನ್ ಸಿಂಗ್ ಶನಿವಾರ ಹೇಳಿದ್ದಾರೆ.

ಪಂಜಾಬ್: ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಮಾರಂಭದಲ್ಲಿ ಗೈರಾಗಲು ಬಹುತೇಕ ವಿಪಕ್ಷಗಳು ನಿಲುವು ತಾಳಿದರೂ ತಾವು ಪಾಲ್ಗೊಳ್ಳುವುದಾಗಿ ಮಾಜಿ ಕ್ರಿಕೆಟಿಗ ಮತ್ತು ಎಎಪಿ ಸಂಸದ ಹರ್ಭಜನ್ ಸಿಂಗ್ ಶನಿವಾರ ಹೇಳಿದ್ದಾರೆ.
"ಯಾರು ಹೋಗ್ತಾರೆ ಅಥವಾ ಹೋಗಲ್ಲ ಅನ್ನೋದು ವಿಷಯವಲ್ಲಾ. ಕಾಂಗ್ರೆಸ್ ಅಥವಾ ಇತರ ಪಕ್ಷಗಳು ಹೋಗಲಿ, ಬಿಡಲಿ ನಾನು ಖಂಡಿತವಾಗಿಯೂ ಹೋಗುತ್ತೇನೆ. ದೇವರನ್ನು ನಂಬುವನಾಗಿ ಇದು ನನ್ನ ವೈಯಕ್ತಿಕ ನಿಲುವು. ಇದರಿಂದ ಯಾರಿಗಾದರೂ ತೊಂದರೆಯಾದರೆ ಅವರು ಬಯಸಿದಂತೆ ಏನೇ ಮಾಡಲಿ ಎಂದು ಎಎನ್ ಐ ಸುದ್ದಿಸಂಸ್ಥೆಗೆ ತಿಳಿಸಿದರು.
ರಾಮಮಂದಿರ ಉದ್ಘಾಟನೆ ಸಮಾರಂಭವನ್ನು ವಿರೋಧ ಪಕ್ಷಗಳು ಬಹಿಷ್ಕರಿಸುವ ಮಧ್ಯೆ ಹರ್ಭಜನ್ ಸಿಂಗ್ ಈ ಹೇಳಿಕೆ ನೀಡಿದ್ದಾರೆ. ಬಿಜೆಪಿ ಈ ಕಾರ್ಯಕ್ರಮವನ್ನು ರಾಜಕೀಯಗೊಳಿಸುತ್ತಿದೆ ಮತ್ತು 2024 ರ ಲೋಕಸಭೆ ಚುನಾವಣೆಗೆ ಪ್ರಚಾರದ ಅಸ್ತ್ರವಾಗಿ ದೇವಾಲಯದ ಉದ್ಘಾಟನೆಯನ್ನು ಬಳಸಿಕೊಳ್ಳುತ್ತಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿವೆ.
"ಈ ಸಮಯದಲ್ಲಿ ಈ ದೇವಾಲಯವನ್ನು ನಿರ್ಮಿಸುತ್ತಿರುವುದು ನಮ್ಮ ಅದೃಷ್ಟ, ಆದ್ದರಿಂದ ನಾವೆಲ್ಲರೂ ಹೋಗಿ ರಾಮನಿಂದ ಆಶೀರ್ವಾದವನ್ನು ಪಡೆಯಬೇಕು. ಆದ್ದರಿಂದ ಖಂಡಿತವಾಗಿಯೂ ಹೋಗುತ್ತಿದ್ದೇನೆ ಎಂದು ಹೇಳಿದರು.
ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಗೈರಾಗುವುದಾಗಿ ಹೇಳಿದ ಕೆಲವು ದಿನಗಳ ನಂತರ ಹರ್ಭಜನ್ ಸಿಂಗ್ ನೀಡಿರುವ ಹೇಳಿಕೆ ಮಹತ್ವ ಪಡೆದಿದೆ. ಜನವರಿ 22ರ ನಂತರ ಪತ್ನಿ, ಮಕ್ಕಳು ಹಾಗೂ ಪೋಷಕರೊಂದಿಗೆ ದೇವಸ್ಥಾನಕ್ಕೆ ಭೇಟಿ ನೀಡುವುದಾಗಿ ಕೇಜ್ರಿವಾಲ್ ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


