ರಾಮಲಲ್ಲಾ ವಿಗ್ರಹದ ತೆರೆದ ಕಣ್ಣುಗಳ ಫೋಟೋ ಬಹಿರಂಗವಾಗಿದ್ದು ಹೇಗೆ ಎಂಬ ಬಗ್ಗೆ ತನಿಖೆ: ಅಯೋಧ್ಯೆ ಮುಖ್ಯ ಅರ್ಚಕ
ಅಯೋಧ್ಯೆಯ ಮಂದಿರದಲ್ಲಿ ಪ್ರತಿಷ್ಠಾಪನೆಯಾಗಲಿರುವ ಭಗವಾನ್ ರಾಮನ ವಿಗ್ರಹದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗತೊಡಗಿದೆ.

ಅಯೋಧ್ಯೆ: ಅಯೋಧ್ಯೆಯ ಮಂದಿರದಲ್ಲಿ ಪ್ರತಿಷ್ಠಾಪನೆಯಾಗಲಿರುವ ಭಗವಾನ್ ರಾಮನ ವಿಗ್ರಹದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗತೊಡಗಿದೆ.
ಪ್ರತಿಷ್ಠಾಪನೆಗೂ ಮುನ್ನ ಕಣ್ಣಿನ ಪಟ್ಟಿ ಕಟ್ಟಲಾಗಿರುತ್ತದೆ. ಆದರೆ ಕಣ್ಣಿನ ಪಟ್ಟಿ ಇಲ್ಲದೇ ಇರುವ ವಿಗ್ರಹ ಫೋಟೊ ಬಹಿರಂಗಗೊಂಡಿದ್ದು ಹೇಗೆ ಎಂಬ ಬಗ್ಗೆ ತನಿಖೆ ನಡೆಯಬೇಕೆಂದು ಅಯೋಧ್ಯೆಯ ಮುಖ್ಯ ಅರ್ಚಕರು ಆಗ್ರಹಿಸಿದ್ದಾರೆ.
ಗರ್ಭಗುಡಿಯಲ್ಲಿ ಇರಿಸಲಾಗಿದ್ದ ವಿಗ್ರಹದ ಫೋಟೋಗಳು ಎಲ್ಲೆಡೆ ವೈರಲ್ ಆಗಿದೆ. ಪ್ರಾಣಪ್ರತಿಷ್ಠಾಪನೆಗೂ ಮುನ್ನ ಭಗವಾನ್ ರಾಮನ ವಿಗ್ರಹದ ಕಣ್ಣುಗಳು ಹೊರಪ್ರಪಂಚಕ್ಕೆ ತೋರುವಂತಿಲ್ಲ ಎಂಬುದು ನಿಯಮ. ಆದರೆ ಕಣ್ಣುಗಳು ಕಾಣುವ ರೀತಿಯಲ್ಲಿ ವಿಗ್ರಹದ ಫೋಟೋವನ್ನು ಬಹಿರಂಗಗೊಳಿಸಿರುವುದರ ಬಗ್ಗೆ ತನಿಖೆಯಾಗಬೇಕು ಎಂದು ಮುಖ್ಯ ಅರ್ಚಕ ಸತ್ಯೇಂದ್ರ ದಾಸ್ ಹೇಳಿದ್ದಾರೆ.
ವಿಶ್ವ ಹಿಂದೂ ಪರಿಷತ್ ಮತ್ತು ದೇವಸ್ಥಾನದ ಟ್ರಸ್ಟ್‌ನ ಪದಾಧಿಕಾರಿಗಳು ಯಾವುದೇ ಛಾಯಾಚಿತ್ರಗಳನ್ನು ಬಿಡುಗಡೆ ಮಾಡಲು ನಿರಾಕರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


