ದೇಶ

ರಾಮಲಲ್ಲಾ ಪ್ರತಿಷ್ಠಾಪನಾ ಸಮಾರಂಭಕ್ಕೆ ಸಿಎಂ ಏಕನಾಥ್ ಶಿಂಧೆ ಗೈರು! ಆದರೆ...

ಅಯೋಧ್ಯೆಯಲ್ಲಿ ನಾಳೆ ನಡೆಯಲಿರುವ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನಾ ಸಮಾರಂಭದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಭಾಗವಹಿಸುತ್ತಿಲ್ಲ. ಆದರೆ, ಉದ್ಘಾಟನಾ ಸಮಾರಂಭ ಬಳಿಕ ಸಂಪುಟ ಸಚಿವರು, ಶಾಸಕರು ಮತ್ತು ಲೋಕಸಭೆ ಸಂಸದರೊಂದಿಗೆ ಅಯೋಧ್ಯೆ ಪ್ರವಾಸ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ರಾಮಲಲ್ಲಾ ಪ್ರತಿಷ್ಠಾಪನಾ ಸಮಾರಂಭಕ್ಕೆ ಸಿಎಂ ಏಕನಾಥ್ ಶಿಂಧೆ ಗೈರು! ಆದರೆ...
ಸಿಎಂ ಏಕನಾಥ್ ಶಿಂಧೆ
Published On :

ಮುಂಬೈ:  ಅಯೋಧ್ಯೆಯಲ್ಲಿ ನಾಳೆ ನಡೆಯಲಿರುವ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನಾ ಸಮಾರಂಭದಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಭಾಗವಹಿಸುತ್ತಿಲ್ಲ. ಆದರೆ, ಉದ್ಘಾಟನಾ ಸಮಾರಂಭ ಬಳಿಕ ಸಂಪುಟ ಸಚಿವರು, ಶಾಸಕರು ಮತ್ತು ಲೋಕಸಭೆ ಸಂಸದರೊಂದಿಗೆ ಅಯೋಧ್ಯೆ  ಪ್ರವಾಸ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಅಯೋಧ್ಯೆಯಲ್ಲಿ ನಡೆಯುವ ಬಾಲರಾಮನ ಪ್ರಾಣ ಪ್ರತಿಷ್ಠಾಪನಾ ಸಮಾರಂಭಕ್ಕೆ ಬೆರಳಿಕೆಯಷ್ಟು ಜನ ಸೇರುವ ಬದಲು ಸಂಪುಟದ ಸಚಿವರು, ಶಾಸಕರು ಮತ್ತು ಸಂಸದರನ್ನು ಕರೆದುಕೊಂಡು ಹೋಗಲು ನಿರ್ಧರಿಸಿದ್ದೇನೆ ಎಂದು ಹೇಳಿದರು. 

ರಾಮ ಮಂದಿರ ನಮ್ಮ ನಂಬಿಕೆ ಮತ್ತು ಹೆಮ್ಮೆಯ ಸಂಗತಿಯಾಗಿದೆ. ನಮ್ಮೊಂದಿಗೆ ಅಧಿಕಾರಿಗಳು ಮತ್ತು ಭಕ್ತರನ್ನು ಸಹ ಅಯೋಧ್ಯೆಗೆ  ಕರೆದೊಯ್ಯಲು ಬಯಸುತ್ತೇನೆ" ನಾಳಿನ ಸಮಾರಂಭಕ್ಕೂ ಮುನ್ನ ದೇವಾಲಯಗಳಲ್ಲಿ ಸ್ವಚ್ಛತಾ ಅಭಿಯಾನ ಕೈಗೊಳ್ಳುವಂತೆ ಹಾಗೂ ದೀಪಗಳಿಂದ ಅಲಂಕರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಶಿಂಧೆ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.