ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ: ಸ್ಪೀಡ್ ಪೋಸ್ಟ್ ಮೂಲಕ ಉದ್ಧವ್ ಠಾಕ್ರೆಗೆ ಆಹ್ವಾನ!
ಅಯೋಧ್ಯೆಯಲ್ಲಿ ಸೋಮವಾರ ನಡೆಯಲಿರುವ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಮಾರಂಭಕ್ಕೆ ಶಿವಸೇನೆ ಯುಬಿಟಿ ಅಧ್ಯಕ್ಷ ಮತ್ತು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಸ್ಪೀಡ್ ಪೋಸ್ಟ್ ಮೂಲಕ ಆಹ್ವಾನ ಕಳುಹಿಸಲಾಗಿದೆ.

ಮುಂಬೈ: ಅಯೋಧ್ಯೆಯಲ್ಲಿ ಸೋಮವಾರ ನಡೆಯಲಿರುವ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ಸಮಾರಂಭಕ್ಕೆ ಶಿವಸೇನೆ ಯುಬಿಟಿ ಅಧ್ಯಕ್ಷ ಮತ್ತು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಸ್ಪೀಡ್ ಪೋಸ್ಟ್ ಮೂಲಕ ಆಹ್ವಾನ ಕಳುಹಿಸಲಾಗಿದೆ.
ಠಾಕ್ರೆ ಕುಟುಂಬವನ್ನು ನಡೆಸಿಕೊಂಡ ರೀತಿಯ ಬಗ್ಗೆ ಶಿವಸೇನಾ-ಯುಬಿಟಿ ಸಂಸದ ಸಂಜಯ್ ರಾವತ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ನಂತರ ಕೊನೆ ಕ್ಷಣದಲ್ಲಿ ಆಹ್ವಾನ ನೀಡಲಾಗಿದೆ. ವೇಗವಾಗಿ ಆಹ್ವಾನ ತಲುಪಿಸುವ ನಿಟ್ಟಿನಲ್ಲಿ ಸ್ಪೀಡ್ ಪೋಸ್ಟ್ ಬಳಸಲಾಗಿದೆ ಎಂದು ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಗೆ ಸೇರಿದ ಮಹಾರಾಷ್ಟ್ರ ಸಚಿವ ಉದಯ್ ಸಾಮಂತ್ ಹೇಳಿದ್ದಾರೆ.
ಆದಾಗ್ಯೂ, ಸ್ಪೀಡ್ ಪೋಸ್ಟ್ ಆಹ್ವಾನಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ರಾವತ್, "ನೀವು ರಾಮನನ್ನು ಪೂಜಿಸಿ ಮತ್ತು ರಾವಣನಂತೆಆಳ್ವಿಕೆ ನಡೆಸುತ್ತೀರಿ. ರಾಮನು ನಿಮ್ಮನ್ನು ಶಪಿಸುತ್ತಾನೆ. ಎಲ್ಲಾ ಚಲನಚಿತ್ರ ತಾರೆಯರನ್ನು ಆಹ್ವಾನಿಸಲಾಗಿದೆ ಆದರೆ ಚಳುವಳಿಯೊಂದಿಗೆ ನಿಕಟ ಸಂಬಂಧ ಹೊಂದಿರುವ ಠಾಕ್ರೆ ಕುಟುಂಬವನ್ನು ಈ ರೀತಿ ನಡೆಸಲಿಕೊಳ್ಳಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉದ್ಧವ್ ಠಾಕ್ರೆ ಸೋಮವಾರದಿಂದ ಎರಡು ದಿನಗಳ ನಾಸಿಕ್ ಗೆ ಭೇಟಿ ನೀಡಲಿದ್ದು, ಅಲ್ಲಿನ ಕಲಾರಾಮ್ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲಿದ್ದು, ಗೋದಾವರಿ ನದಿ ದಡದಲ್ಲಿ 'ಮಹಾ ಆರತಿ' ಮಾಡಲಿದ್ದಾರೆ. ಮಂಗಳವಾರ, ಅವರು ನಾಸಿಕ್‌ನಲ್ಲಿ ತಮ್ಮ ಪಕ್ಷದ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.
ಉತ್ತರ ಪ್ರದೇಶದ ಅಯೋಧ್ಯೆ ನಗರದಲ್ಲಿ ಸೋಮವಾರ ಬಹು ನಿರೀಕ್ಷಿತ ರಾಮ ಮಂದಿರ ಉದ್ಘಾಟನೆ ನೆರವೇರಲಿದೆ. ಈ ಸಮಾರಂಭಕ್ಕೆ 8,000ಕ್ಕೂ ಹೆಚ್ಚು ಗಣ್ಯರನ್ನು ಆಹ್ವಾನಿಸಲಾಗಿದೆ. ಇದರಲ್ಲಿ ರಾಮ ಜನ್ಮಭೂಮಿಯಲ್ಲಿ ಮಂದಿರಕ್ಕಾಗಿ ನಡೆದ ಹೋರಾಡಿದ ಕುಟುಂಬದ ಸದಸ್ಯರು ಸಹ ಸೇರಿದ್ದಾರೆ. ಬಹುತೇಕ ಎಲ್ಲಾ ವಿರೋಧ ಪಕ್ಷದ ನಾಯಕರು ಸಮಾರಂಭಕ್ಕೆ ಹಾಜರಾಗಲು ನಿರಾಕರಿಸಿದ್ದಾರೆ.ಕಾಂಗ್ರೆಸ್ ಇದನ್ನು ಬಿಜೆಪಿ-ಆರ್‌ಎಸ್‌ಎಸ್ ಕಾರ್ಯಕ್ರಮ ಎಂದು ಕರೆದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


