ದೇಶ

ಶ್ರೀರಾಮ್ ಘೋಷಣೆ ವೇಳೆ ತಾಳ್ಮೆ ಕಳೆದುಕೊಂಡ ರಾಹುಲ್ ವಿಡಿಯೋ: ಬಿಜೆಪಿ ದಾಳಿಗೆ ಕಾಂಗ್ರೆಸ್ ಪ್ರತಿದಾಳಿ

ಅಸ್ಸಾಂನಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆ ವೇಳೆಯಲ್ಲಿ ಜೈ ಶ್ರೀರಾಮ್ ಹಾಗೂ ಪ್ರಧಾನಿ ಮೋದಿ ಪರ ಜಯ ಘೋಷಣೆಗಳಿಂದ ತಾಳ್ಮೆ ಕಳೆದುಕೊಂಡ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಕುರಿತ ವಿಡಿಯೋ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ.

ಶ್ರೀರಾಮ್ ಘೋಷಣೆ ವೇಳೆ ತಾಳ್ಮೆ ಕಳೆದುಕೊಂಡ ರಾಹುಲ್ ವಿಡಿಯೋ: ಬಿಜೆಪಿ ದಾಳಿಗೆ ಕಾಂಗ್ರೆಸ್ ಪ್ರತಿದಾಳಿ
ರಾಹುಲ್ ಗಾಂಧಿ ಎದುರು ಬಿಜೆಪಿ ಕಾರ್ಯಕರ್ತರು
Published On :

ಗುವಾಹಟಿ: ಅಸ್ಸಾಂನಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆ ವೇಳೆಯಲ್ಲಿ ಜೈ ಶ್ರೀರಾಮ್ ಹಾಗೂ ಪ್ರಧಾನಿ ಮೋದಿ ಪರ ಜಯ ಘೋಷಣೆಗಳಿಂದ ತಾಳ್ಮೆ ಕಳೆದುಕೊಂಡ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಕುರಿತ ವಿಡಿಯೋ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ವಾಕ್ಸಮರಕ್ಕೆ ಕಾರಣವಾಗಿದೆ. 

ಈ ಕುರಿತ ವಿಡಿಯೋವೊಂದನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಫೋಸ್ಟ್ ಮಾಡಿರುವ ಅಸ್ಸಾಂ ಸಿಎಂ ಹಿಮಂತಾ ಬಿಸ್ವಾ ಶರ್ಮಾ, ರಾಹುಲ್ ಗಾಂಧಿ ತಾಳ್ಮೆ ಕಳೆದುಕೊಳ್ಳಬಾರದು. ಶ್ರೀರಾಮ ಎಂದು ಕೂಗಿದರೆ ಅವರಿಗೆ ಅಲರ್ಜಿ ಎಂದು ಕೇಳಿದ್ದಾರೆ. ಈ ವಿಡಿಯೋದಲ್ಲಿ ಬಿಜೆಪಿ ಭಾವುಟಗಳೊಂದಿಗೆ ಅಪಾರ ಸಂಖ್ಯೆಯಲ್ಲಿ ಕಾರ್ಯಕರ್ತರು ಜಮಾಯಿಸಿದ್ದಾರೆ.

ಈ ವಿಡಿಯೋವನ್ನು ಹಂಚಿಕೊಂಡಿರುವ ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವೀಯಾ, ಇದನ್ನೇ ನಿಭಾಯಿಸದವರು ಮುಂದೆ ದೇಶದ ಜನರನ್ನು ಹೇಗೆ ರಾಹುಲ್ ಗಾಂಧಿ ನಿಭಾಯಿಸುತ್ತಾರೆ ಎಂದು ಪ್ರಶ್ನಿಸಿದ್ದಾರೆ

ಮಾಳವೀಯಾ ಅವರ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಸೋಶಿಯಲ್ ಮೀಡಿಯಾ ಮುಖ್ಯಸ್ಥೆ ಸುಪ್ರಿಯಾ ಶ್ರಿನಾಟೆ, ರಾಹುಲ್ ಗಾಂಧಿ ತಾಳ್ಮೆ ಕಳೆದುಕೊಂಡಿಲ್ಲ. ಘೋಷಣೆ ಕೂಗುತ್ತಿದ್ದ ಜನರ ಬಳಿ ಮಾತನಾಡಲು ತೆರಳುತ್ತಿದ್ದಾಗ ಗುಂಪು ಅಲ್ಲಿಂದ ತೆರಳಿದೆ. ಅದನ್ನು ಅವರು ಧೈರ್ಯದಿಂದ ಮಾಡಿದ್ದಾರೆ. ಬಿಜೆಪಿಯವರು ಅರ್ಥಮಾಡಿಕೊಂಡಿಲ್ಲ. ಈಗ ಬಾಯಿಮುಚ್ಚಿಕೊಂಡು, ಕುಳಿತಿದ್ದಾರೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.