ದೇಶ

ಅಯೋಧ್ಯೆ: ಇಂದು ಪೂಜೆ ಸಲ್ಲಿಸಲು ಪ್ರಧಾನಿ ಮೋದಿಗೆ ದೇವರು ಕೊಟ್ಟ ಅವಕಾಶ- ಎಚ್‌ಡಿ ದೇವೇಗೌಡ

ಅಯೋಧ್ಯೆಯಲ್ಲಿ ನಡೆಯುತ್ತಿರುವ ರಾಮಲಲ್ಲಾ ಅವರ ಪ್ರಾಣ ಪ್ರತಿಷ್ಠಾಪನಾ ಸಮಾರಂಭದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಪೂಜೆ ನೆರವೇರಿಸುತ್ತಿರುವುದು ದೇವರು ಕೊಟ್ಟ ಅವಕಾಶ ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಹೇಳಿದ್ದಾರೆ.

ಅಯೋಧ್ಯೆ: ಇಂದು ಪೂಜೆ ಸಲ್ಲಿಸಲು ಪ್ರಧಾನಿ ಮೋದಿಗೆ ದೇವರು ಕೊಟ್ಟ ಅವಕಾಶ- ಎಚ್‌ಡಿ ದೇವೇಗೌಡ
ಹೆಚ್. ಡಿ.ದೇವೇಗೌಡ
Published On :

ಅಯೋಧ್ಯೆ: ಅಯೋಧ್ಯೆಯಲ್ಲಿ ನಡೆಯುತ್ತಿರುವ ರಾಮಲಲ್ಲಾ ಅವರ ಪ್ರಾಣ ಪ್ರತಿಷ್ಠಾಪನಾ ಸಮಾರಂಭದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಪೂಜೆ ನೆರವೇರಿಸುತ್ತಿರುವುದು ದೇವರು ಕೊಟ್ಟ ಅವಕಾಶ ಎಂದು ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಹೇಳಿದ್ದಾರೆ. 

ರಾಮ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ತಮ್ಮನ್ನು ಆಹ್ವಾನಿಸಿದ್ದಕ್ಕಾಗಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಧನ್ಯವಾದ ಅರ್ಪಿಸಿದ ಮಾಜಿ ಪ್ರಧಾನಿ, ಇಂದು ಐತಿಹಾಸಿಕ ಕಾರ್ಯಕ್ರಮವಾಗಿದೆ ಎಂದರು.

ರಾಮನಲ್ಲಿ ನಮಗೆ ದೃಢವಾದ ನಂಬಿಕೆ ಇದೆ. ರಾಮ ಲಲ್ಲಾನ ಪವಿತ್ರ ಪೂಜೆ ಮಾಡಲು ಹೊರಟಿರುವ  ಪ್ರಧಾನಿ ಮೋದಿಯವರಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ. ಪ್ರಧಾನಿ ಮೋದಿ ಅಮೂಲ್ಯವಾದ ವ್ಯಕ್ತಿ. ಇದು ದೇವರು ನೀಡಿದ ಅವಕಾಶಗಳಲ್ಲಿ ಒಂದಾಗಿದೆ. ಅದು ಎಲ್ಲರಿಗೂ ಬರುವುದಿಲ್ಲ, ಅವರು ವಿಷ್ಣು ಮತ್ತು ಶಿವನ ಆಶೀರ್ವಾದವನ್ನು ಪಡೆದಿದ್ದಾರೆ ಎಂದು ಅವರು ಎಎನ್ ಐ ಸುದ್ದಿಸಂಸ್ಥೆಗೆ ತಿಳಿಸಿದರು. 

ಪ್ರಧಾನಿ ಮೋದಿ ಪೂಜೆ ನೆರವೇರಿಸುತ್ತಿರುವುದು ಅತೀವ ಸಂತಸವಾಗಿದೆ. ಶ್ರೀರಾಮ ಪ್ರಾಣ ಪ್ರತಿಷ್ಠಾಪನಾ ಸಮಾರಂಭದಲ್ಲಿ ವಿಪಕ್ಷಗಳ ಒಕ್ಕೂಟದ ನಾಯಕರು ಭಾಗವಹಿಸದಿರುವುದು ಸರಿಯಾದ ನಿರ್ಧಾರವಲ್ಲ ಎಂದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.