ಪ್ರಧಾನಿ ಮೋದಿ, ಸಿಎಂ ಯೋಗಿ ಆದಿತ್ಯನಾಥ್ ರಾಮ, ಲಕ್ಷ್ಮಣ ಇದ್ದಂತೆ: ನಟ ಸುಮನ್
ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಮ, ಲಕ್ಷ್ಮಣ ಇದ್ದಂತೆ ಎಂದು ಬಹುಭಾಷಾ ನಟ ಸುಮನ್ ಹೇಳಿದ್ದಾರೆ.

ಅಯೋಧ್ಯೆ: ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ರಾಮ, ಲಕ್ಷ್ಮಣ ಇದ್ದಂತೆ ಎಂದು ಬಹುಭಾಷಾ ನಟ ಸುಮನ್ ಹೇಳಿದ್ದಾರೆ.
ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನಾ ಸಮಾರಂಭದಲ್ಲಿ ಅತಿಥಿಯಾಗಿ ಪಾಲ್ಗೊಂಡು, ಸುದ್ದಿಗಾರರೊಂದಿಗೆ ಮಾತನಾಡಿದ 'ಗಬ್ಬರ್ ಈಸ್ ಬ್ಯಾಕ್ ನಟ ಸುಮನ್, ರಾಮ ಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಅಭಿನಂದಿಸಿದ್ದಾರೆ.
ಇವರಿಬ್ಬರು ರಾಮ ಮತ್ತು ಲಕ್ಷ್ಮಣರಂತೆ. ಈ ದೇವಾಲಯವನ್ನು ಇಲ್ಲಿಗೆ ಬರುವಂತೆ ಮಾಡಿದ್ದಾರೆ. ಇದು ದೇವರ ಕೆಲಸವಾಗಿದೆ ಎಂದು ಭಾವಿಸುತ್ತೇನೆ. ಈ ದೇವಾಲಯ ನಿರ್ಮಿಸಲು ಅವರನ್ನು ದೇವರೇ ಸೃಷ್ಟಿಸಿದ್ದಾನೆ. ಇದು ಭಾರತದ ರಾಷ್ಟ್ರೀಯ ಸ್ಮಾರಕವಾಗಲಿದೆ ಎಂದರು.
ಅವರಲ್ಲದೆ, ರಜನಿಕಾಂತ್, ಚಿರಂಜೀವಿ, ರಾಮ್ ಚರಣ್, ಮಾಧುರಿ ದೀಕ್ಷಿತ್ ನೇನೆ, ವಿಕ್ಕಿ ಕೌಶಲ್, ಕತ್ರಿನಾ ಕೈಫ್, ಆಯುಷ್ಮಾನ್ ಖುರಾನಾ, ರಣಬೀರ್ ಕಪೂರ್, ಆಲಿಯಾ ಭಟ್, ಅಮಿತಾಬ್ ಬಚ್ಚನ್, ಅಭಿಷೇಕ್ ಬಚ್ಚನ್, ಕಂಗನಾ ರಣಾವತ್ ಮತ್ತು ಅನುಪಮ್ ಖೇರ್ ಮತ್ತಿತರರು ಸಮಾರಂಭದಲ್ಲಿ ಪಾಲ್ಗೊಂಡರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


