ಬ್ಯಾರಿಕೇಡ್‌ಗಳನ್ನು ಮುರಿಯಲು ಪ್ರಚೋದನೆ; ರಾಹುಲ್ ವಿರುದ್ಧ ಪ್ರಕರಣ ದಾಖಲಿಸಲು ಡಿಜಿಪಿಗೆ ಸೂಚನೆ: ಅಸ್ಸಾಂ ಸಿಎಂ
ಬ್ಯಾರಿಕೇಡ್ ಗಳನ್ನು ಮುರಿಯುವುದಕ್ಕೆ ಜನಸ್ತೋಮಕ್ಕೆ ಪ್ರಚೋದನೆ ನೀಡಿದ್ದಕ್ಕಾಗಿ ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸುವುದಕ್ಕೆ ಡಿಜಿಪಿ ಜಿಪಿ ಸಿಂಗ್ ಅವರಿಗೆ ಸೂಚನೆ ನೀಡಲಾಗಿದೆ ಎಂದು ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮ ಹೇಳಿದ್ದಾರೆ.

ಗುವಾಹಟಿ: ಬ್ಯಾರಿಕೇಡ್ ಗಳನ್ನು ಮುರಿಯುವುದಕ್ಕೆ ಜನಸ್ತೋಮಕ್ಕೆ ಪ್ರಚೋದನೆ ನೀಡಿದ್ದಕ್ಕಾಗಿ ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸುವುದಕ್ಕೆ ಡಿಜಿಪಿ ಜಿಪಿ ಸಿಂಗ್ ಅವರಿಗೆ ಸೂಚನೆ ನೀಡಲಾಗಿದೆ ಎಂದು ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮ ಹೇಳಿದ್ದಾರೆ.
ಕಾಂಗ್ರೆಸ್ ನ ಯುವ ಘಟಕದ ಅಧ್ಯಕ್ಷ ಶ್ರೀನಿವಾಸ್ ಅವರ ಟ್ವೀಟ್ ಗೆ ಪ್ರತಿಕ್ರಿಯೆ ನೀಡಿರುವ ಹಿಮಂತ ಬಿಸ್ವ ಶರ್ಮ ಈ ಮಾಹಿತಿ ಹಮ್ಮಿಕೊಂಡಿದ್ದಾರೆ.
ಶ್ರೀನಿವಾಸ್ ಅವರ ಹ್ಯಾಂಡಲ್ ನಲ್ಲಿದ್ದ ವೀಡಿಯೋಗಳನ್ನು ಸಾಕ್ಷ್ಯವನ್ನಾಗಿ ಬಳಕೆ ಮಾಡಿಕೊಳ್ಳಲಾಗುತ್ತದೆ ಎಂದು ಹಿಮಂತ ಬಿಸ್ವ ಶರ್ಮ ಹೇಳಿದ್ದಾರೆ.
ಇವು ಅಸ್ಸಾಮಿ ಸಂಸ್ಕೃತಿಯ ಭಾಗವಲ್ಲ. ನಮ್ಮದು ಶಾಂತಿಯುತ ರಾಜ್ಯ. ಇಂತಹ ನಕ್ಸಲೀಯ ತಂತ್ರಗಳು ನಮ್ಮ ಸಂಸ್ಕೃತಿಗೆ ಸಂಪೂರ್ಣವಾಗಿ ಪರಕೀಯವಾಗಿವೆ ಎಂದು ಮುಖ್ಯಮಂತ್ರಿ, ರಾಹುಲ್ ಗಾಂಧಿ ಭಾರತ್ ಜೋಡೋ ನ್ಯಾಯ್ ಯಾತ್ರೆಯ ವೇಳೆ ಉಂಟಾದ ಘರ್ಷಣೆಗಳ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಇದನ್ನೂ ಓದಿ: 'ನಾವು ಬ್ಯಾರಿಕೇಡ್ ಮುರಿದಿದ್ದೇವೆ, ಆದರೆ ಕಾನೂನು ಮುರಿಯುವುದಿಲ್ಲ; ಅಸ್ಸಾಂನಲ್ಲಿ ಸರ್ಕಾರ ರಚಿಸುತ್ತೇವೆ': ರಾಹುಲ್ ಗಾಂಧಿ
'ನಿಮ್ಮ ಅಶಿಸ್ತಿನ ನಡವಳಿಕೆ ಮತ್ತು ಒಪ್ಪಿಗೆ ಸೂಚಿಸಿದ ಮಾರ್ಗಸೂಚಿಗಳ ಉಲ್ಲಂಘನೆಯು ಈಗ ಗುವಾಹಟಿಯಲ್ಲಿ ಭಾರಿ ಟ್ರಾಫಿಕ್ ಜಾಮ್‌ಗೆ ಕಾರಣವಾಗಿದೆ' ಎಂದು ಹಿಮಂತ ಬಿಸ್ವ ಶರ್ಮಾ ಹೇಳಿದ್ದಾರೆ.
ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆಯನ್ನು ಮಂಗಳವಾರ ನಗರಕ್ಕೆ ಪ್ರವೇಶಿಸದಂತೆ ತಡೆಯಲಾಯಿತು, ಬ್ಯಾರಿಕೇಡ್‌ಗಳನ್ನು ಮುರಿದು ಘೋಷಣೆಗಳನ್ನು ಕೂಗಿದ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆಯನ್ನು ಪ್ರಚೋದಿಸಿದರು. ನಂತರ ನಗರದ ಹೊರವಲಯದಲ್ಲಿ ಪಕ್ಷದ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಗಾಂಧಿ, "ನಾವು ಬ್ಯಾರಿಕೇಡ್‌ಗಳನ್ನು ಮುರಿದಿದ್ದೇವೆ, ಆದರೆ ಕಾನೂನನ್ನು ಮುರಿಯುವುದಿಲ್ಲ" ಎಂದು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


