ರಾಹುಲ್ ಗಾಂಧಿ ವಿರುದ್ಧ ಎಫ್ಐಆರ್ ದಾಖಲು: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ
ಉದ್ದೇಶಪೂರ್ವಕವಾಗಿ ಸಾರ್ವಜನಿಕ ಆಸ್ತಿ ಹಾನಿ ಮಾಡಿದ ಆರೋಪದ ಮೇಲೆ ಪೊಲೀಸರು ಮಂಗಳವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಇತರ ನಾಯಕರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ...

ಗುವಾಹಟಿ: ಉದ್ದೇಶಪೂರ್ವಕವಾಗಿ ಸಾರ್ವಜನಿಕ ಆಸ್ತಿ ಹಾನಿ ಮಾಡಿದ ಆರೋಪದ ಮೇಲೆ ಪೊಲೀಸರು ಮಂಗಳವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಇತರ ನಾಯಕರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ಹೇಳಿದ್ದಾರೆ.
ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ್ ಯಾತ್ರೆಯು ಪ್ರಸ್ತುತ ಅಸ್ಸಾಂನಲ್ಲಿದೆ ಮತ್ತು ಗುವಾಹಟಿಗೆ ಪ್ರವೇಶಿಸುವ ವೇಳೆ ಪಕ್ಷದ ಬೆಂಬಲಿಗರು ಮತ್ತು ಮುಖಂಡರು ಬ್ಯಾರಿಕೇಡ್‌ಗಳನ್ನು ಮುರಿದು ಪೊಲೀಸ್ ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.
'ಇಂದು ಉದ್ದೇಶಪೂರ್ವಕವಾಗಿ ಹಿಂಸಾಚಾರ, ಪ್ರಚೋದನೆ, ಸಾರ್ವಜನಿಕ ಆಸ್ತಿ ಹಾನಿ ಮತ್ತು ಪೊಲೀಸ್ ಸಿಬ್ಬಂದಿ ಮೇಲಿನ ಹಲ್ಲೆಯನ್ನು ಉಲ್ಲೇಖಿಸಿ ರಾಹುಲ್ ಗಾಂಧಿ, ಕೆಸಿ ವೇಣುಗೋಪಾಲ್, ಕನ್ಹಯ್ಯಾ ಕುಮಾರ್ ಮತ್ತು ಇತರ ವ್ಯಕ್ತಿಗಳ ವಿರುದ್ಧ ಸೆಕ್ಷನ್ 120(ಬಿ)143/ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ' ಎಂದು ಅಸ್ಸಾಂ ಮುಖ್ಯಮಂತ್ರಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಇದಕ್ಕು ಮುನ್ನ ಬ್ಯಾರಿಕೇಡ್‌ಗಳನ್ನು ಮುರಿಯಲು ಜನರನ್ನು ಪ್ರಚೋದಿಸಿದ್ದಕ್ಕಾಗಿ ರಾಹುಲ್ ಗಾಂಧಿ ವಿರುದ್ಧ ಪ್ರಕರಣ ದಾಖಲಿಸುವಂತೆ ಹಿಮಂತ್ ಬಿಸ್ವಾ ಶರ್ಮಾ ಅವರು ಪೊಲೀಸ್ ಮಹಾನಿರ್ದೇಶಕ ಜಿ ಪಿ ಸಿಂಗ್ ಅವರಿಗೆ ಸೂಚಿಸಿದ್ದರು.
ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಜಿಪಿ ಸಿಂಗ್ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


