ಅಯೋಧ್ಯೆ: ರಾಮ ಲಲ್ಲಾಗೆ 11 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ ಅರ್ಪಿಸಿದ ಸೂರತ್ ಉದ್ಯಮಿ!
ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ರಾಮಮಂದಿರದಲ್ಲಿ ರಾಮ ಲಲ್ಲಾ ವಿರಾಜಮಾನನಾಗಿದ್ದಾನೆ. ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 22ರಂದು ರಾಮ ಲಲ್ಲಾನಿಗೆ ಪ್ರಾಣ ಪ್ರತಿಷ್ಠೆ ನೆರವೇರಿಸಿದ್ದಾರೆ.

ಅಯೋಧ್ಯೆ: ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ರಾಮಮಂದಿರದಲ್ಲಿ ರಾಮ ಲಲ್ಲಾ ವಿರಾಜಮಾನನಾಗಿದ್ದಾನೆ. ಪ್ರಧಾನಿ ನರೇಂದ್ರ ಮೋದಿ ಅವರು ಜನವರಿ 22ರಂದು ರಾಮ ಲಲ್ಲಾನಿಗೆ ಪ್ರಾಣ ಪ್ರತಿಷ್ಠೆ ನೆರವೇರಿಸಿದ್ದಾರೆ.
ಆ ಮೂಲಕ ಕೋಟ್ಯಂತರ ಭಾರತೀಯರ 500 ವರ್ಷಗಳ ಕನಸು ನನಸಾದಂತಾಗಿದೆ. ಇದರ ಬೆನ್ನಲ್ಲೇ, ಗುಜರಾತ್ ಮೂಲದ ವಜ್ರದ ವ್ಯಾಪಾರಿ ಮುಕೇಶ್ ಪಟೇಲ್ ಎಂಬುವರು ರಾಮಲಲ್ಲಾನಿಗೆ ಸುಮಾರು 11 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟವನ್ನು ಉಡುಗೊರೆಯಾಗಿ ನೀಡಿದ್ದಾರೆ.
ಸೂರತ್‌ನಲ್ಲಿ ಗ್ರೀನ್ ಲ್ಯಾಬ್ ಡೈಮಂಡ್ ಕಂಪನಿಯ ಮಾಲೀಕರಾಗಿರುವ, ರಾಮನ ಮೇಲೆ ಅಪಾರ ನಂಬಿಕೆ ಇಟ್ಟಿರುವ ಮುಕೇಶ್ ಪಟೇಲ್ ಕುಟುಂಬಸ್ಥರು 11 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟವನ್ನು ಕೊಡುಗೆಯಾಗಿ ಕೊಟ್ಟು ರಾಮನ ಮೇಲಿನ ಭಕ್ತಿ ಮೆರೆದಿದ್ದಾರೆ.
ಚಿನ್ನ, ಮುತ್ತುಗಳು ಹಾಗೂ ವಜ್ರಗಳಿಂದ ಉತ್ತರ ಭಾರತ ಶೈಲಿಯಲ್ಲಿ ಕಿರೀಟವನ್ನು ತಯಾರಿಸಲಾಗಿದೆ. ಮುಕೇಶ್ ಪಟೇಲ್ ಅವರ ಕಂಪನಿಯ ಇಬ್ಬರು ಉದ್ಯೋಗಿಗಳು ಅಯೋಧ್ಯೆಗೆ ಬಂದು, ರಾಮಲಲ್ಲಾ ಮೂರ್ತಿಯ ಅಳತೆಯನ್ನು ತೆಗೆದುಕೊಂಡು ಹೋಗಿದ್ದಾರೆ. ಇದಾದ ಬಳಿಕ ಕಿರೀಟವನ್ನು ತಯಾರಿಸಲಾಗಿದೆ ಎಂದು ತಿಳಿದುಬಂದಿದೆ.
ನಮ್ಮ ಇಡೀ ಕುಟುಂಬವು ರಾಮನ ಮೇಲೆ ಅಪಾರ ಭಕ್ತಿಯನ್ನು ಹೊಂದಿದೆ. ನಮ್ಮ ಪೂರ್ವಜರು ಕೂಡ ಅಯೋಧ್ಯೆಯಲ್ಲೊಂದು ರಾಮಮಂದಿರ ನಿರ್ಮಾಣವಾಗಬೇಕು ಎಂಬ ಕನಸು ಕಂಡಿದ್ದರು. ರಾಮಮಂದಿರದ ಕನಸು ಈಗ ನನಸಾಗಿದೆ. ಇದರಿಂದ ನಮ್ಮ ಕುಟುಂಬವು ಸಂತಸದ ಕಡಲಲ್ಲಿ ಮುಳುಗಿಸಿದೆ. ಭಗವಾನ್ ಶ್ರೀರಾಮನು ನಮಗೆ ಸಾಕಷ್ಟು ಕೊಟ್ಟಿದ್ದಾನೆ. ಈಗ ನಾವು ರಾಮಲಲ್ಲಾನಿಗೆ ಕಿರೀಟ ನೀಡುವ ಮೂಲಕ ಸಣ್ಣ ಕೊಡುಗೆ ಕೊಟ್ಟಿದ್ದೇವೆ. ರಾಮನ ದರ್ಶನ ಪಡೆದಿರುವುದು ಕೂಡ ನಮ್ಮ ಸೌಭಾಗ್ಯ” ಎಂದು ಮುಕೇಶ್ ಪಟೇಲ್ ಅವರು ಸಂತಸ ವ್ಯಕ್ತಪಡಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


