ಅಯೋಧ್ಯೆಯಲ್ಲಿ ನೋಡಿದ್ದು, ಮುಂದಿನ ವರ್ಷಗಳಲ್ಲಿ ನಮ್ಮ ನೆನಪಿನಲ್ಲಿ ಉಳಿಯುತ್ತದೆ: ಪ್ರಧಾನಿ ಮೋದಿ
ಅಯೋಧ್ಯೆಯಲ್ಲಿ ನಿನ್ನೆ ನಡೆದ ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನಾ ಸಮಾರಂಭ ಮುಂದಿನ ವರ್ಷಗಳಲ್ಲಿ ನಮ್ಮ ನೆನಪಿನಲ್ಲಿ ಉಳಿಯುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದ್ದಾರೆ.

ನವದೆಹಲಿ: ಅಯೋಧ್ಯೆಯಲ್ಲಿ ನಿನ್ನೆ ನಡೆದ ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನಾ ಸಮಾರಂಭ ಮುಂದಿನ ವರ್ಷಗಳಲ್ಲಿ ನಮ್ಮ ನೆನಪಿನಲ್ಲಿ ಉಳಿಯುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಹೇಳಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸಮಾರಂಭದ ವಿಡಿಯೋ ಹಂಚಿಕೊಂಡಿರುವ ಪ್ರಧಾನಿ, ಸೋಮವಾರದ ಸಮಾರಂಭ ನಮ್ಮ ನೆನಪಿನಲ್ಲಿ ಉಳಿಯಲಿದೆ ಎಂದು ಹೇಳಿದ್ದಾರೆ.
ಮೂರು ನಿಮಿಷಗಳ ವೀಡಿಯೊದಲ್ಲಿ, ಮಡಚಿದ ಕೆಂಪು ದುಪಟ್ಟಾದಲ್ಲಿ ಬೆಳ್ಳಿ ಛತ್ರಿ ಹಿಡಿದುಕೊಂಡು ಪ್ರಧಾನಿ ದೇವಾಲಯದ ಗರ್ಭಗುಡಿಗೆ ಕಾಲಿಡುತ್ತಿರುವುದನ್ನು ಕಾಣಬಹುದು. ನೂತನವಾಗಿ ನಿರ್ಮಿಸಲಾದ ದೇವಾಲಯದಲ್ಲಿ ಪ್ರಧಾನಿ ಮೋದಿಯವರು ಪವಿತ್ರ ಸಮಾರಂಭದಲ್ಲಿ ಪಾಲ್ಗೊಂಡು ಹೊಸ ರಾಮ್ ಲಲ್ಲಾ ವಿಗ್ರಹದಿಂದ ಆಶೀರ್ವಾದ ತೆಗೆದುಕೊಳ್ಳುವುದು ವಿಡಿಯೋದಲ್ಲಿದೆ.
ಜನವರಿ 22 "ಕ್ಯಾಲೆಂಡರ್‌ನಲ್ಲಿ ದಿನಾಂಕವಲ್ಲ, ಆದರೆ ಹೊಸ ಯುಗದ ಉದಯ. ಸಾವಿರಾರು ವರ್ಷಗಳ ನಂತರವೂ ಜನರು ಈ ದಿನಾಂಕ, ಕ್ಷಣವನ್ನು ನೆನಪಿಸಿಕೊಳ್ಳುತ್ತಾರೆ. ನಾವು ಇದನ್ನು ವೀಕ್ಷಿಸುತ್ತಿರುವುದು ರಾಮನ ಪರಮ ಆಶೀರ್ವಾದವಾಗಿದೆ. ಇವು ಶಾಶ್ವತವಾದ ನೆನಪುಗಳು ಎಂದು ಸೋಮವಾರ ಪ್ರಧಾನಿ ಹೇಳಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


