ದೇಶ

ಅಸ್ಸಾಂನಲ್ಲಿ 10 ಕೋಟಿ ರೂ. ಮೌಲ್ಯದ ಗಾಂಜಾ ವಶ, ಇಬ್ಬರ ಪೆಡ್ಲರ್‌ಗಳ ಬಂಧನ

ಅಸ್ಸಾಂನ ಗುವಾಹಟಿಯಲ್ಲಿ ಸುಮಾರು 10 ಕೋಟಿ ರೂಪಾಯಿ ಮೌಲ್ಯದ ಅಪಾರ ಪ್ರಮಾಣದ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಇಬ್ಬರು ಪೆಡ್ಲರ್‌ಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಅಸ್ಸಾಂನಲ್ಲಿ 10 ಕೋಟಿ ರೂ. ಮೌಲ್ಯದ ಗಾಂಜಾ ವಶ, ಇಬ್ಬರ ಪೆಡ್ಲರ್‌ಗಳ ಬಂಧನ
ಸಾಂದರ್ಬಿಕ ಚಿತ್ರ
Published On :

ಗುವಾಹಟಿ: ಅಸ್ಸಾಂನ ಗುವಾಹಟಿಯಲ್ಲಿ ಸುಮಾರು 10 ಕೋಟಿ ರೂಪಾಯಿ ಮೌಲ್ಯದ ಅಪಾರ ಪ್ರಮಾಣದ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಇಬ್ಬರು ಪೆಡ್ಲರ್‌ಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಅಸ್ಸಾಂ ಪೊಲೀಸ್ ವಿಶೇಷ ಕಾರ್ಯಪಡೆಯ ತಂಡ, ಉಪ ನಿರೀಕ್ಷಕ ಪಾರ್ಥಸಾರಥಿ ಮಹಂತ ನೇತೃತ್ವದಲ್ಲಿ ಬಸಿಷ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಬೆಹರ್ಬರಿ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಿ, ಕಚ್ಚಾ ರಬ್ಬರ್ ಅಡಿಯಲ್ಲಿ 4,000 ಕೆಜಿ ಗಾಂಜಾವನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ತಡೆದಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.

"ನಿಷೇಧಿತ ಈ ಗಾಂಜಾವನ್ನು ತ್ರಿಪುರಾದಿಂದ ಮಧ್ಯ ಭಾರತದ ರಾಜ್ಯಕ್ಕೆ ಸಾಗಿಸಲಾಗುತ್ತಿತ್ತು. ಪೊಲೀಸ್ ತಂಡ 4,000 ಕೆಜಿ ಗಾಂಜಾವನ್ನು ವಶಪಡಿಸಿಕೊಂಡಿದೆ" ಎಂದು ಮಹಂತ ಅವರು ತಿಳಿಸಿದ್ದಾರೆ.

ವಶಪಡಿಸಿಕೊಂಡ ಮಾದಕ ವಸ್ತುವಿನ ಮಾರುಕಟ್ಟೆ ಮೌಲ್ಯ ಅಂದಾಜು 10 ಕೋಟಿ ರೂಪಾಯಿ ಎಂದು ಅವರು ಹೇಳಿದ್ದಾರೆ.

ಕಾರ್ಯಾಚರಣೆಯ ಸಮಯದಲ್ಲಿ, ಇಬ್ಬರು ಪೆಡ್ಲರ್‌ಗಳನ್ನು ಬಂಧಿಸಲಾಗಿದೆ ಮಹಂತ ಅವರು ತಿಳಿಸಿದ್ದಾರೆ.
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.