ಲೋಕಸಭೆ ಚುನಾವಣೆ ಬಳಿಕ ರಾಹುಲ್ ಗಾಂಧಿ ಬಂಧನ: ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮಾ
ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಲೋಕಸಭೆ ಚುನಾವಣೆ ನಂತರ ಅವರನ್ನು ಬಂಧಿಸಲಾಗುವುದು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಬುಧವಾರ ಹೇಳಿದ್ದಾರೆ.

ಗುವಾಹಟಿ: ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಲೋಕಸಭೆ ಚುನಾವಣೆ ನಂತರ ಅವರನ್ನು ಬಂಧಿಸಲಾಗುವುದು ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಬುಧವಾರ ಹೇಳಿದ್ದಾರೆ.
ಮಂಗಳವಾರ ನಡೆದ ಪಕ್ಷದ 'ಭಾರತ್ ಜೋಡೋ ನ್ಯಾಯ್ ಯಾತ್ರೆ' ವೇಳೆ ಅಸ್ಸಾಂ ಪೊಲೀಸರು ಸ್ವಯಂ ಪ್ರೇರಿತವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಇತರ ಹಲವು ನಾಯಕರ ವಿರುದ್ಧ ಹಿಂಸಾಚಾರಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಎಫ್‌ಐಆರ್ ದಾಖಲಿಸಿದ್ದಾರೆ.
'ಕಾಂಗ್ರೆಸ್ ನಾಯಕನ ವಿರುದ್ಧ ಎಫ್‌ಐಆರ್ ದಾಖಲಿಸಿದ್ದೇವೆ. ವಿಶೇಷ ತನಿಖಾ ತಂಡ(ಎಸ್‌ಐಟಿ) ಪ್ರಕರಣದ ತನಿಖೆ ನಡೆಸಲಿದೆ ಮತ್ತು ಲೋಕಸಭೆ ಚುನಾವಣೆಯ ನಂತರ ಅವರನ್ನು(ಗಾಂಧಿ) ಬಂಧಿಸಲಾಗುವುದು' ಎಂದು ಅಸ್ಸಾಂ ಸಿಎಂ ಶರ್ಮಾ ತಿಳಿಸಿದ್ದಾರೆ.
ಕಾಂಗ್ರೆಸ್ ನಾಯಕರ ವಿರುದ್ಧದ ಪ್ರಕರಣವನ್ನು ಎಸ್‌ಐಟಿ ಮೂಲಕ ಸಮಗ್ರ ತನಿಖೆಗಾಗಿ ಅಸ್ಸಾಂ ಸಿಐಡಿಗೆ ವರ್ಗಾಯಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು(ಸಿಐಡಿ) ಪೊಲೀಸ್ ಮಹಾನಿರ್ದೇಶಕ ಜಿ ಪಿ ಸಿಂಗ್ ಹೇಳಿದ್ದಾರೆ.
ದೇಶದಲ್ಲಿ ಇನ್ನೇನು ಕೆಲವೇ ತಿಂಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


